Advertisement
ಅಧ್ಯಕ್ಷತೆ ವಹಿಸಿದ್ದ ವಕ್ಫ್ ಸಲಹಾ ಸಮಿತಿ ಜಿಲ್ಲಾಧ್ಯಕ್ಷ ಯು.ಕೆ. ಮೋನು ಕಣಚೂರು ಮಾತನಾಡಿ, ಮಾಹಿತಿ ಕೊರತೆಯಿಂದ ಸೌಲಭ್ಯಗಳು ಸಮರ್ಥರನ್ನು ತಲುಪುವಲ್ಲಿ ವಿಫಲವಾಗುತ್ತಿದೆ. ಆದ್ದರಿಂದ ತಾಲೂಕು ಮಟ್ಟದಲ್ಲಿ ಅಧಿಕಾರಿಗಳಿಂದ ಜನರಿಗೆ ಮಾಹಿತಿ ಒದಗಿಸುವ ಕಾರ್ಯ ನಡೆಯುತ್ತಿದೆ ಎಂದರು.
ತಾಲೂಕಿನ ಗಂಗಾ ಕಲ್ಯಾಣ ಯೋಜನೆಯ 25 ಫಲಾನುಭವಿಗಳಿಗೆ ತಲಾ 2 ಲಕ್ಷ ರೂ. ಮೊತ್ತದ ಚೆಕ್ಕನ್ನು ಶಾಸಕ ಕೆ. ವಸಂತ ಬಂಗೇರ ವಿತರಿಸಿದರು. ವಕ್ಫ್ ಸಲಹಾ ಸಮಿತಿ ಸದಸ್ಯ ಕೆ.ಎಂ. ಅಬ್ದುಲ್ ಕರೀಂ, ಜಿ.ಪಂ. ಸದಸ್ಯ ಶಾಹುಲ್ ಹಮೀದ್, ವಕ್ಫ್ ಬೋರ್ಡ್ ಮಾಜಿ ಸದಸ್ಯ ಉಮರ್ ಕುಂಞಿ, ಗುರುವಾಯನಕೆರೆ ಜುಮ್ಮಾ ಮಸೀದಿ ಅಧ್ಯಕ್ಷ ಉಸ್ಮಾನ್ ಬಳಂಲಜ, ಜಮೀಯತುಲ್ ಫಲಾಹ್ ಅಧ್ಯಕ್ಷ ಖಾಸೀಂ ಮಲ್ಲಿಗೆಮನೆ, ಮುಸ್ಲಿಂ ಐಕ್ಯ ವೇದಿಕೆ ಅಧ್ಯಕ್ಷ ಕೆ. ಸಲೀಂ, ಸೈಯದ್ ಹಬೀಬ್ ಸಾಹೇಬ್ ನಡ, ವಕ್ಫ್ ಆಧಿಕಾರಿ ಅಬೂಬಕ್ಕರ್, ಅಲ್ಪಸಂಖ್ಯಾಕರ ಅಭಿವೃದ್ಧಿ ನಿಗಮದ ಅಧಿಕಾರಿ ಶ್ರೀಧರ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು. ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯ ಹಾಜಿ ಹಸನಬ್ಬ ಚಾರ್ಮಾಡಿ ಸ್ವಾಗತಿಸಿದರು. ಅಶ್ರಫ್ ಆಲಿ ಕುಂಞಿ ನಿರೂಪಿಸಿದರು. ಅನುದಾನ
ನನ್ನ ಅಧಿಕಾರಾವಧಿಯಲ್ಲಿ ಇಲ್ಲಿನ ಸಮುದಾಯಭವನಕ್ಕೆ ಅನುದಾನ ಬಿಡುಗಡೆಗೊಳಿಸಿದ್ದೇನೆ. ವಿಪಕ್ಷದವರು ತನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿಕೊಂಡು ತಿರುಗಾಡುತ್ತಿದ್ದಾರೆ. ಇದಕ್ಕೆ ತಾನು ತಲೆಕೆಡಿಸಿಕೊಳ್ಳುವುದಿಲ್ಲ. ತಾಲೂಕಿನ ವಿವಿಧೆಡೆ ಅಭಿವೃದ್ಧಿ ಕಾರ್ಯ ನಡೆಸುತ್ತಿದ್ದೇನೆ.
– ಕೆ. ವಸಂತ ಬಂಗೇರ
ಶಾಸಕರು