Advertisement

ಕಾರ್ಕಳ: ತಾಲೂಕು ಕಚೇರಿ ಸಿಬ್ಬಂದಿ ಬಾವಿಗೆ ಹಾರಿ ಆತ್ಮಹತ್ಯೆ

12:56 PM Jul 25, 2022 | |

ಕಾರ್ಕಳ: ಕಳೆದ ಕೆಲ ವರ್ಷಗಳಿಂದ ಕಾರ್ಕಳ ತಾಲೂಕು ಕಚೇರಿ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರವಿವಾರ ರಾತ್ರಿ ನಡೆದಿದೆ.

Advertisement

ಸುಶ್ಮಿತ (25) ಮೃತ ಸಿಬ್ಬಂದಿ. ಇವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾರ್ಕಳದ ಹುಡ್ಕೋ ಕಾಲನಿ ನಿವಾಸಿಯಾಗಿರುವ ಸುಶ್ಮಿತ, ತಂದೆ – ತಾಯಿ ಹಾಗೂ ಓರ್ವ ಸಹೋದರಿಯನ್ನು ಅಗಲಿದ್ದಾರೆ.

ಜಿಲ್ಲಾಧಿಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದಿದ್ದಾರೆ.

ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next