Advertisement
ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ಶನಿವಾರ ತಾಪಂ ಅಧ್ಯಕ್ಷೆ ಎಚ್.ಎಸ್.ಶಿವ ಕುಮಾರಿ ಅಧ್ಯಕ್ಷತೆಯಲ್ಲಿ ನಡೆದ ತಾಪಂ ಸಾಮಾನ್ಯ ಸಭೆಯಲ್ಲಿ ಮಾತನಾಡಿ, ರೋಗ ಹರಡುತ್ತಿರುವುದರಿಂದ ರೈತರಿಗೆ ಹೆಚ್ಚು ನಷ್ಟ ಅನುಭವಿಸುವಂತಾಗಿದೆ. ಆದ್ದರಿಂದ ಪ್ರಚಾರ ಮಾಡಬೇಕು. ಪ್ರಮುಖವಾಗಿ ಗ್ರಾಮೀಣ ಭಾಗದಲ್ಲಿ ಜಾಗೃತಿ ಮೂಡಿಸಲು ಕರಪತ್ರ ಮುದ್ರಿಸಿ ಹಂಚಿಕೆ ಮಾಡುವಂತೆ ಸೂಚನೆ ನೀಡಿದರು.
Related Articles
Advertisement
ಯೋಜನೆಗೆ ಒಳಪಡಿಸಿ: ತಾಪಂ ಸದಸ್ಯ ಶಂಕರ್‌ಬಾಬು ಮಾತನಾಡಿ, ತಾಲೂಕಿನಲ್ಲಿ ಕುಡಿ ಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಯೋಜನೆ ರೂಪಿಸಬೇಕಿದೆ. ಈ ಬಗ್ಗೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.
ಇದಕ್ಕೆ ಶಾಸಕ ಎಂ.ಶ್ರೀನಿವಾಸ್, ಜಲಧಾರೆ ಯೋಜನೆಯ 2ನೇ ಹಂತದಲ್ಲಿ ಅಥವಾ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಮಂಡ್ಯ ತಾಲೂಕನ್ನು ಒಳಪಡಿಸಬೇಕು. ಆದ್ದರಿಂದ ಎಲ್ಲೆಲ್ಲಿ ವಾಟರ್‌ಟ್ಯಾಂಕ್‌ನ ಅವಶ್ಯಕತೆ ಇದೆ ಎಂಬುದರ ಬಗ್ಗೆ ಸಮೀಕ್ಷೆ ನಡೆಸುವಂತೆ ಸೂಚಿಸಿದರು.
ನರ್ಸರಿ ನೌಕರರಿಗೆ ವೇತನ ನೀಡಿ: ಸದಸ್ಯ ಮಂಜೇಗೌಡ ಮಾತನಾಡಿ, ಬಸರಾಳಿನಲ್ಲಿ ಅರಣ್ಯ ಇಲಾಖೆಯ ನರ್ಸರಿಯಲ್ಲಿ ಕೂಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇವರಿಗೆ ಹಲವು ತಿಂಗಳಿನಿಂದ ಏಕೆ ವೇತನ ಕೊಟ್ಟಿಲ್ಲ ಎಂದು ಪ್ರಶ್ನಿಸಿದರು. ಅರಣ್ಯ ಇಲಾಖೆ ಅಧಿಕಾರಿ ಬೀರಪ್ಪ ಪ್ರತಿಕ್ರಿಯಿಸಿ,ಅನುದಾನದ ಸಮಸ್ಯೆ ಇತ್ತು. ಬಿಡು ಗಡೆಯಾದ ಕೂಡಲೇ ಕೊಡುವುದಾಗಿ ತಿಳಿಸಿದರು. ಎಂ.ಶ್ರೀನಿವಾಸ್ ಮಾತನಾಡಿ, ಅರಣ್ಯ ಇಲಾಖೆಯವರು ರೈತರಿಗೆ ಮಹಾಘನಿ ಸಸಿಗಳನ್ನು ನೀಡಬೇಕು
ಎಂದು ಸೂಚನೆ ನೀಡಿದರು. ಸಭೆಯಲ್ಲಿ ತಾಪಂ ಉಪಾಧ್ಯಕ್ಷೆ ಶ್ವೇತಾ, ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್, ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ಬಸವ ರಾಜು ಹಾಜರಿದ್ದರು.