Advertisement

ಯೂರಿಯಾ ಕೃತಕ ಅಭಾವ ಸೃಷ್ಟಿಯಾದರೆ ಕ್ರಮ

03:43 PM Sep 06, 2020 | Suhan S |

ಗಂಗಾವತಿ: ಯೂರಿಯಾ ಗೊಬ್ಬರದ ಕೊರತೆಯಿಂದ ರೈತರು ಆತಂಕಕ್ಕೀಡಾಗಿದ್ದು, ಗಂಗಾವತಿ, ಕಾರಟಗಿ, ಕನಕಗಿರಿ ತಾಲೂಕಿನಲ್ಲಿ ಯೂರಿಯಾ ಕೊರತೆಯಾಗದಂತೆ ಕೃಷಿ ಇಲಾಖೆ ಅಧಿಕಾರಿಗಳು ನೋಡಿಕೊಳ್ಳಬೇಕು. ಕೃತಕ ಅಭಾವ ಸೃಷ್ಟಿ ಮಾಡುವ ವ್ಯಾಪಾರಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ತಾ.ಪಂ. ಅಧ್ಯಕ್ಷ ಮಹಮದ್‌ ರಫಿ ಅಧಿಕಾರಿಗಳಿಗೆ ಸೂಚಿಸಿದರು.

Advertisement

ತಾ.ಪಂ. ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು. ಈ ಬಾರಿ ತುಂಗಭದ್ರಾ ಡ್ಯಾಂ ಭರ್ತಿಯಾಗಿದೆ. ಉತ್ತಮ ಮಳೆಯಾಗುತ್ತಿದ್ದು, ಈಗಾಗಲೇ ಭತ್ತದ ನಾಟಿಯಾಗಿದೆ. ಬಯಲುಸೀಮೆ ರೈತರು ಬಿತ್ತನೆ ಕಾರ್ಯ ಮುಗಿಸಿದ್ದು, ರೈತರಿಗೆ ಯೂರಿಯಾ ಕಾಂಪ್ಲೆಕ್ಸ್‌ ಗೊಬ್ಬರದ ಅಗತ್ಯವಿದೆ. ಅಖಂಡ ಗಂಗಾವತಿ ತಾಲೂಕಿಗೆ 30 ಸಾವಿರ ಮೆಟ್ರಿಕ್‌ ಟನ್‌ ಯೂರಿಯಾ ಅಗತ್ಯವಿದ್ದು, ಪ್ರಸ್ತುತ ಹಂಗಾಮಿನಲ್ಲಿ 15 ಸಾವಿರ ಮೆಟ್ರಿಕ್‌ ಟನ್‌ ಯೂರಿಯಾ ಗೊಬ್ಬರ ಪೂರೈಕೆ ಮಾಡಲಾಗಿದೆ. ಇದರಿಂದ ರೈತರಿಗೆ ರಾಸಾಯನಿಕ ಗೊಬ್ಬರದ ಕೊರತೆಯಾಗಿದೆ. ಮಣ್ಣಿನ ಆರೋಗ್ಯದ ದೃಷ್ಟಿಯಿಂದ ಯೂರಿಯಾ ಬಳಕೆ ಕಡಿಮೆ ಮಾಡಬೇಕು ನಿಜಾ. ಆದರೆ ಏಕಾಎಕಿ ಗೊಬ್ಬರದ ಕೊರತೆಯಾದರೆ ರೈತರು ಸಂಕಷ್ಟಕ್ಕೀಡಾಗುತ್ತಾರೆ.

ಆದ್ದರಿಂದ ಸರಕಾರ ಕೂಡಲೇ ಗೊಬ್ಬರ ಪೂರೈಕೆ ಮಾಡಲು ಕ್ರಮ ವಹಿಸಬೇಕು. ಕೆಲ ಗೊಬ್ಬರ ವ್ಯಾಪಾರಸ್ಥರು ಕೃತಕ ಅಭಾವ ಸೃಷ್ಟಿ ಮಾಡಿ ಅಧಿಕ ದರಕ್ಕೆ ಮಾರಾಟ ಮಾಡುವ ದೂರುಗಳಿದ್ದು, ಕೃಷಿ ಇಲಾಖೆಯವರು ಕ್ರಮ ಜರುಗಿಸಬೇಕು. ಪಶುಗಳಿಗೆ ಲಂಪಿ ಚರ್ಮಾವ್ಯಾಧಿ ಹರಡುವ ಭೀತಿಯಿದ್ದು, ಪಶುಸಂಗೋಪನಾ ಇಲಾಖೆ ಮತ್ತು ಕೃಷಿ ವಿಜ್ಞಾನ ಕೇಂದ್ರ, ಕೃಷಿ ಸಂಶೋಧನಾ ಕೇಂದ್ರದ ವಿಜ್ಞಾನಿಗಳು ಮತ್ತು ಅಧಿಕಾರಿಗಳು ಕೂಡಲೇ ಗ್ರಾಮೀಣ ಭಾಗದಲ್ಲಿ ಲಂಪಿ ಚರ್ಮ ವ್ಯಾ ಧಿ ಬಗ್ಗೆ ಪ್ರಚಾರ ಮಾಡಿ ಅಗತ್ಯ ಚಿಕಿತ್ಸೆ ನೀಡುವಂತೆ ಸಲಹೆ ನೀಡಿದರು.

ತಾಪಂ ಉಪಾಧ್ಯಕ್ಷೆ ಗೀತಾ ಶರಣೇಗೌಡ, ಸ್ಥಾಯಿ ಸಮಿತಿ ಅಧ್ಯಕ್ಷ ವೈ. ರಮೇಶ, ಇಒ ಡಾ|ಮೋಹನಕುಮಾರ ಸೇರಿ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next