Advertisement

ತಲ್ವಾರ್ ದಂಪತಿ ಸೋಮವಾರ ಜೈಲಿನಿಂದ ಬಿಡುಗಡೆ ಸಾಧ್ಯತೆ

05:57 PM Oct 13, 2017 | Sharanya Alva |

ಅಲಹಾಬಾದ್:ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಆರುಷಿ ತಲ್ವಾರ್ ಹೇಮರಾಜ್ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಆರುಷಿ ಪೋಷಕರನ್ನು ಅಲಹಾಬಾದ್ ಹೈಕೋರ್ಟ್ ಖುಲಾಸೆಗೊಳಿಸಿ ತೀರ್ಪು ನೀಡಿತ್ತು. ಆರುಷಿ ದಂಪತಿಗಳು ಸೋಮವಾರ ದಾಸ್ನಾ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

Advertisement

ಕೊಲೆ ಪ್ರಕರಣದಲ್ಲಿ ಖುಲಾಸೆಗೊಂಡಿರುವ ರಾಜೇಶ್ ಮತ್ತು ನೂಪುರ್ ತಲ್ವಾರ್ ಶುಕ್ರವಾರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇಲ್ಲ. ಯಾಕೆಂದರೆ ಖುಲಾಸೆಗೊಳಿಸಿ ತೀರ್ಪು ನೀಡಿದ ಕೋರ್ಟ್ ನ ಆದೇಶದ ಪ್ರತಿ ಇನ್ನೂ ಜೈಲು ಅಧಿಕಾರಿಗಳಿಗೆ ತಲುಪಿಲ್ಲ. ನಾಳೆ 2ನೇ ಶನಿವಾರ, ಆ ನಿಟ್ಟಿನಲ್ಲಿ ಸೋಮವಾರ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ತಲ್ವಾರ್ ದಂಪತಿಗಳ ವಕೀಲರಾದ ತನ್ವೀರ್ ಮೀರ್ ಅಹ್ಮದ್ ಪಿಟಿಐಗೆ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next