Advertisement

ಹೊರ ರಾಜ್ಯಕ್ಕೆ ಹುಣಸೆ, ಕೊಬ್ಬರಿ

04:38 PM Apr 23, 2020 | mahesh |

ತುಮಕೂರು: ಜಿಲ್ಲೆಯಿಂದ ಹುಣಸೆ ಹಣ್ಣು ಮತ್ತು ಕೊಬ್ಬರಿಯನ್ನು ಕೆಲವು ನಿಬಂಧನೆಗೊಳಪಟ್ಟು ಹೊರ ರಾಜ್ಯಗಳಿಗೆ ಕಳುಹಿಸಲು ಏ.24ರಿಂದ ಅವಕಾಶ ಕಲ್ಪಿಸಲಾಗಿದೆ ಎಂದು ಕಾನೂನು ಮತ್ತು ವ್ಯವ ಹಾರಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲೆಯ ಶಾಸಕರು ಮತ್ತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕೋವಿಡ್‌-19 ಸೋಂಕು ಹರಡದಂತೆ ತಡೆಗಟ್ಟುವ ಸಲುವಾಗಿ ಹೊರ ರಾಜ್ಯಗಳಿಗೆ ಹುಣಸೆ ಹಣ್ಣು ಮತ್ತು ಕೊಬ್ಬರಿ ತೆಗೆದುಕೊಂಡು ಹೋಗಿ ವಾಪಸ್‌ ಬರುವ ಲಾರಿ ಡ್ರೈವರ್‌ ಗಳನ್ನು 14 ದಿನಗಳವರೆಗೆ ಕಡ್ಡಾಯವಾಗಿ ಕ್ವಾರೆಂಟೈನ್‌ ಮಾಡಲಾಗುವುದು ಎಂದರು.

Advertisement

ಕೋವಿಡ್‌-19ರ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಲ್ಲಿ ರೈಸ್‌ಮಿಲ್‌ಗ‌ಳಲ್ಲಿ ಹೊರ ರಾಜ್ಯಗಳಿಂದ ಭತ್ತ ತರಿಸುತ್ತಿರು ವುದು ಹಾಗೂ ರೈಸ್‌ ಸರಬರಾಜು ಮಾಡುತ್ತಿದ್ದು, ವ್ಯವಸ್ಥಿತವಾಗಿ ನಿರ್ವಹಣೆ ಮಾಡುತ್ತಿದ್ದಾರೆ. ಅದೇ ರೀತಿ ಕೊಬ್ಬರಿ ಹಾಗೂ ಹುಣಸೆ ಹಣ್ಣಿನ ವರ್ತಕರು, ಎಪಿಎಂಸಿಗಳು ನಿರ್ವಹಣೆ ಮಾಡಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್‌ ಕುಮಾರ್‌ ಮಾತನಾಡಿ, ಹೊರ ರಾಜ್ಯ ಗಳಿಗೆ ಹೋಗುವ ಲಾರಿ ಚಾಲಕರನ್ನು ಆರೋಗ್ಯ ತಪಾಸಣೆಗೊಳಪಡಿಸಬೇಕು. ಸಾರ್ವಜನಿಕರ ಆರೋಗ್ಯದ ಸುರಕ್ಷತೆ ಯಿಂದ ಅವರನ್ನು ಕ್ವಾರೆಂಟೈನ್‌ ಮಾಡುವ ಷರತ್ತುಗೊಳಪಟ್ಟು ವಹಿವಾಟಿಗೆ ಅನುಮತಿ ನೀಡಲಾಗುತ್ತಿದೆ. ಅಲ್ಲದೇ ವಾಹನ ಚಾಲಕನಿಗೆ ಮಾಸ್ಕ್, ಸ್ಯಾನಿಟೈಸರ್‌ಗಳನ್ನು ಒದಗಿಸಿ, ಊಟವನ್ನು ಪಾರ್ಸಲ್‌ ತಂದು ಲಾರಿಯಲ್ಲಿಯೇ ತಿನ್ನಬೇಕು ಮತ್ತು ಜಿಲ್ಲೆಯಿಂದ ಹೋಗುವ ಚಾಲಕರಿಗಾಗಿ ಸಹಾಯವಾಣಿ ತೆರೆಯಲಾಗುವುದು. ಯಾವುದೇ ರೀತಿಯ ಸಮಸ್ಯೆಯಾದಲ್ಲಿ
ಅವರು ಸಂಪರ್ಕಿಸಬಹುದು ಎಂದರು.

ಶಾಸಕ ಬಿ.ಸಿ ನಾಗೇಶ್‌ ಮಾತನಾಡಿ, ತುರುವೇಕೆರೆ, ದಂಡಿನಶಿವರಗಳಲ್ಲಿ ಹೆಚ್ಚಾಗಿ ಕೊಬ್ಬರಿ ಲೋಡ್‌ ಆಗುತ್ತಿದೆ. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ರೈತರು ಸಂಕಷ್ಟದಲ್ಲಿದ್ದು, ರೈತರಿಂದ ಕೊಬ್ಬರಿಯನ್ನು ಕಡಿಮೆಬೆಲೆಗೆ ಖರೀದಿಸುತ್ತಿದ್ದು, ಇದರಿಂದ ರೈತರಿಗೆ ನಷ್ಟವಾಗುತ್ತಿದೆ ಎಂದು ಹೇಳಿದರು. ಡಿಎಚ್‌ಒ ಡಾ. ಬಿ.ಆರ್‌. ಚಂದ್ರಿಕಾ, ಸಂಸದ ಜಿ.ಎಸ್‌. ಬಸವರಾಜು, ಶಾಸಕರಾದ ಜಿ.ಬಿ. ಜ್ಯೋತಿಗಣೇಶ್‌, ವೀರ ಭದ್ರಯ್ಯ, ಬಿ. ಸತ್ಯನಾರಾಯಣ, ಜಯರಾಂ, ರಂಗನಾಥ್‌, ಜಿಪಂ ಸಿಇಒ ಶುಭಾ ಕಲ್ಯಾಣ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ ಕೊ.ನ ವಂಸಿಕೃಷ್ಣ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next