Advertisement

ಕಾಂಗ್ರೆಸ್‌ನಿಂದ ತಮಟೆ-ಜಾಗಟೆ ಪ್ರತಿಭಟನೆ

02:21 PM Apr 01, 2022 | Team Udayavani |

ಹಿರಿಯೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆಡಳಿತ ವೈಫಲ್ಯ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ನಗರದಲ್ಲಿ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಬೈಕ್‌ಗೆ ಪೂಜೆ ಮಾಡಿ ತಮಟೆ, ಜಾಗಟೆ ಬಾರಿ ಪ್ರತಿಭಟನೆ ನಡೆಸಲಾಯಿತು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಎಚ್‌. ಆಂಜನೇಯ ಮಾತನಾಡಿ, ದೇಶ ಮತ್ತು ರಾಜ್ಯದಲ್ಲಿನ ಬಿಜೆಪಿ ಸರ್ಕಾರಗಳು ಅಗತ್ಯ ವಸ್ತುಗಳ ಬೆಲೆಯನ್ನು ನಿಯಂತ್ರಿಸದೆ ಬಡವರು ಹಾಗೂ ಜನಸಾಮಾನ್ಯರನ್ನು ಬೀದಿಗೆ ತಂದು ನಿಲ್ಲಿಸಿದೆ. ಯುವಕರಿಗೆ ಉದ್ಯೋಗವಿಲ್ಲ. ಅಗತ್ಯ ವಸ್ತುಗಳ ಬೆಲೆ ದುಬಾರಿಯಾಗಿವೆ. ಸರ್ಕಾರದ ಪೊಳ್ಳು ಭರವಸೆಗಳಿಂದ ಜನರು ಬೇಸತ್ತಿದ್ದು, ಬಿಜೆಪಿ ಸರ್ಕಾರವನ್ನು ತೊಲಗಿಸಲು ಚುನಾವಣೆಯನ್ನು ಎದುರು ನೋಡುತ್ತಿದ್ದಾರೆ ಎಂದರು.

ಮಾಜಿ ಸಚಿವ ಡಿ. ಸುಧಾಕರ್‌ ಮಾತನಾಡಿ, ಕೊರೊನಾದಿಂದ ಎಲ್ಲೆಡೆ ಆರ್ಥಿಕ ಮುಗ್ಗಟ್ಟು ಉಂಟಾಗಿದೆ. ಬೆಲೆ ಏರಿಕೆ ಅಸ್ಥಿರತೆಯಿಂದ ಜನರಿಗೆ ನೆಮ್ಮದಿ ಇಲ್ಲದಂತಾಗಿದೆ. ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌ ಸಿಲಿಂಡರ್‌ ಬೆಲೆ ಹೆಚ್ಚಾಗಿ ಗಾಯದ ಮೇಲೆ ಬರೆ ಎಳೆದಂತಾಗಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸೋಲು ಖಚಿತ ಎಂದು ಭವಿಷ್ಯ ನುಡಿದರು.

ಪ್ರತಿಭಟನೆಯಲ್ಲಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಮೇಶ್‌ ಖಾದಿ, ರಾಜ್ಯ ಕಾಂಗ್ರೆಸ್‌ ಕಾರ್ಮಿಕ ಸಂಘಟನೆ ಅಧ್ಯಕ್ಷ ಜಿ.ಎಸ್‌. ಮಂಜುನಾಥ್‌, ಕೆ.ಎಂ. ಅಮೃತೇಶ್ವರ, ಡಾ| ಜೆ.ಆರ್‌. ಸುಜಾತಾ, ಗಿರೀಶ್‌, ವಿ. ಶಿವಕುಮಾರ್‌, ಜ್ಞಾನೇಶ್‌, ಸಿದ್ದೇಶ್‌, ಜಿ.ಎಲ್‌. ಮೂರ್ತಿ, ಹನುಮಂತರಾಯಪ್ಪ, ಕವಿತಾ ಲೋಕೇಶ್‌ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next