ಚೆನ್ನೈ: ಮಾದಕ ವಸ್ತು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ತಮಿಳು ನಟರೊಬ್ಬರ ಪುತ್ರನನ್ನು ಬಂಧಿಸಲಾಗಿದೆ.
ತಮಿಳು ನಟ ಮನ್ಸೂರ್ ಅಲಿ ಖಾನ್ (Tamil actor Mansoor Ali) ಅವರ ಪುತ್ರ ಅಲಿ ಖಾನ್ ತುಘಲಕ್ (Ali Khan Tughlaq) ಅವರನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ಮನ್ಸೂರ್ ಅಲಿ ಪುತ್ರ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮಂಗಳವಾರ (ಡಿ.3ರಂದು) ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಬುಧವಾರ (ಡಿ.4ರಂದು) ಬೆಳಿಗ್ಗೆ ತಿರುಮಂಗಲಂ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಈ ಪ್ರಕರಣದಲ್ಲಿ ಈ ಹಿಂದೆ 10 ಮಂದಿಯನ್ನು ಬಂಧಿಸಲಾಗಿದೆ. ಇದರಲ್ಲಿ ಕಾಲೇಜು ವಿದ್ಯಾರ್ಥಿಗಳು ಕೂಡ ಇದ್ದಾರೆ.
ಇದೀಗ ತುಘಲಕ್ ಮತ್ತು ಇತರ ಮೂವರನ್ನು ಬಂಧಿಸಲಾಗಿದೆ. ಸದ್ಯ ಅವರೆಲ್ಲರೂ ಪೊಲೀಸ್ ಕಸ್ಟಡಿಯಲ್ಲಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ನಟ ಮನ್ಸೂರ್ ಅಲಿ ಈ ವರ್ಷ ವಿವಾದಗಳಿಂದಲೇ ಸುದ್ದಿಯಾಗಿದ್ದಾರೆ. ನಟಿ ತ್ರಿಷಾ ಜತೆ ಬೆಡ್ ರೂಮ್ ಸೀನ್ ಮಾಡುವ ಆಸೆಯಿದೆ ಎನ್ನುವ ಮಾತು ಕಾಲಿವುಡ್ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಕುರಿತು ಮನ್ಸೂರ್ ಅಲಿ ಕ್ಷಮೆಯಾಚಿಸಿದ್ದರು.