Advertisement

ತಮಿಳು ಖ್ಯಾತ ಹಾಸ್ಯ ನಟ ವಿವೇಕ್ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು: ಅಭಿಮಾನಿಗಳಲ್ಲಿ ಆತಂಕ

03:45 PM Apr 16, 2021 | Team Udayavani |

ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ವಿವೇಕ್ ಶುಕ್ರವಾರ (ಏಪ್ರಿಲ್ 16) ಹೃದಯಾಘಾತಕ್ಕೊಳಗಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿ ತಿಳಿಸಿದೆ. ನಟ ವಿವೇಕ್ ಅವರು ಗುರುವಾರ(ಏ.15)ಒಮಾನ್ದುರಾರ್ ಸರ್ಕಾರಿ ಆಸ್ಪತ್ರೆಯಲ್ಲಿ  ಕೋವ್ಯಾಕ್ಸಿನ್ ಲಸಿಕೆ ಪಡೆದಿದ್ದರು.

Advertisement

ಇದನ್ನೂ ಓದಿ:ಭಾನುವಾರ ಉತ್ತರ ಪ್ರದೇಶ ಲಾಕ್ ಡೌನ್ : ಮಾಸ್ಕ್ ಹಾಕದಿದ್ದರೆ 10,000 ದಂಡ!

ವರದಿಯ ಪ್ರಕಾರ, ವಿವೇಕ್ ಅವರು ಇಂದು ಬೆಳಗ್ಗೆ ಎದೆ ನೋವು ಎಂದು ತಿಳಿಸಿದ್ದು, ಕೂಡಲೇ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆಗೊಳಪಡಿಸಿದ ಸಂದರ್ಭದಲ್ಲಿ ವಿವೇಕ್ ಅವರಿಗೆ ಹೃದಯಾಘಾತವಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ವಿವೇಕ್ ಅವರ ಆರೋಗ್ಯ ಗಂಭೀರವಾಗಿದ್ದು, ವೈದ್ಯರ ತಂಡ ಆರೋಗ್ಯ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಆ್ಯಂಜಿಯೋಗ್ರಾಮ್ ಮಾಡಲು ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.

59 ವರ್ಷದ ನಟ ವಿವೇಕ್ ಅವರು ಏಪ್ರಿಲ್ 15ರಂದು ಮೊದಲ ಕೋವಿಡ್ ಲಸಿಕೆಯನ್ನು ಪಡೆದಿದ್ದರು. ಬಳಿಕ ಸುದ್ದಿಗಾರರ ಜತೆ ಮಾತನಾಡಿದ್ದ ಅವರು, ಯಾರೆಲ್ಲಾ ಲಸಿಕೆ ಪಡೆಯಲು ಅರ್ಹರೋ ಅವರೆಲ್ಲರೂ ಲಸಿಕೆ ಪಡೆಯುವಂತೆ ಮನವಿ ಮಾಡಿಕೊಂಡಿದ್ದರು.

Advertisement

ವಿವೇಕ್ 1989ರಲ್ಲಿ ಕೆ.ಎಸ್.ರವಿಕುಮಾರ್ ಅವರ “ಪುದು, ಪುದು ಅರ್ಥಂಗಳ್” ಸಿನಿಮಾದಲ್ಲಿ ನಟಿಸುವ ಮೂಲಕ ಬೆಳ್ಳಿ ತೆರೆಗೆ ಪ್ರವೇಶಿಸಿದ್ದರು. ನೂರಾರು ಸಿನಿಮಾಗಳಲ್ಲಿ ನಟಿಸಿರುವ ವಿವೇಕ್ ದೇಶದ ಪ್ರತಿಷ್ಠಿತ ಪದ್ಮಶ್ರೀ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next