Advertisement
ತಮಿಳುನಾಡಿನ ಮುಖ್ಯಮಂತ್ರಿ ಎಮ್ ಕೆ. ಸ್ಟ್ಯಾಲಿನ್ ಇಂದು(ಸೋಮವಾರ, ಜುಲೈ 12) ಕರೆದಿದ್ದ ಸರ್ವ ಪಕ್ಷಗಳ ಸಭೆಯಲ್ಲಿ, ತಮಿಳುನಾಡಿನ 13 ಪಕ್ಷಗಳ ಮ್ರಮುಖ ನಾಯಕರು ಒಮ್ಮತದ ನಿಲುವಿಗೆ ಬಂದಿದ್ದಾರೆ. ಮೇಕೆದಾಟು ಅಣೆಕಟ್ಟು ಯೋಜನೆಯನ್ನು ತಡೆಹಿಡಿಯುವ ಉದ್ದೆಶದಿಂದ ತಮಿಳುನಾಡಿನ ಸರ್ವ ಪಕ್ಷಗಳು ಒಗ್ಗೂಡಿವೆ.
Related Articles
Advertisement
ಇನ್ನು, ತಮಿಳುನಾಡು ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಲು ನವದೆಹಲಿಗೆ ಸರ್ವಪಕ್ಷಗಳ ನಿಯೋಗವು ತೆರಳಿ ನಿರ್ಣಯದ ಪ್ರತಿಯನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ನೀಡಲು ನಿರ್ಧರಿಸಿದೆ.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸ್ಟ್ಯಾಲಿನ್, ‘ಕಾವೇರಿ ನದಿ ಪಾತ್ರದಲ್ಲಿ ನಿರ್ಮಾಣ ಚಟುವಟಿಕೆ ಕೈಗೊಳ್ಳಬಾರದು ಎಂಬುದು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಸ್ಪಷ್ಟಪಡಿಸದೆಯಾದರೂ, ಅಣೆಕಟ್ಟು ನಿರ್ಮಿಸಲು ಕರ್ನಾಟಕ ಮುಂದಾಗಿದೆ. ಕರ್ನಾಟಕ ಸರ್ಕಾರದ ಈ ಧೋರಣೆ ಸಾಂವಿಧಾನಿಕ ಕಾಯ್ದೆಗಳಿಗೆ ಸವಾಲು ಹಾಕುವಂತದ್ದಾಗಿದೆ. ಅಣೆಕಟ್ಟು ನಿರ್ಮಿಸಲು ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ ಎಂದಿದ್ದಾರೆ.
ಕರ್ನಾಟರ ಸರ್ಕಾರ ಉದ್ದೇಶಿಸಿದಂತೆ ಅಣೆಕಟ್ಟು ನಿರ್ಮಾಣ ಮಾಡಿದರೆ ತಮಿಳುನಾಡಿನ ಜನರು, ರೈತರು ಸಂಕಷ್ಟಕ್ಕೀಡಾಗುತ್ತಾರೆ. ತಮಿಳುನಾಡಿಗೆ ಆಗುವ ಧಕ್ಕೆಯ ಕಾರಣದಿಂದಾಗಿ ಕಂದ್ರ ಸರ್ಕಾರ ಯಾವುದೇ ರೀತಿಯಲ್ಲಿಯೂ ಕರ್ನಾಟಕ ಸರ್ಕಾರದ ಯೋಜನೆಗೆ ಅನುಮೋದನೆ ನೀಡಬಾರದು ಎಂಬ ನಿರ್ಣಯ ಪ್ರತಿಯನ್ನು ಓದಿ ವಿವರಿಸಿದರು.
ಕಾವೇರಿ ನದಿ ಕರ್ನಾಟಕ್ಕೆ ಮಾತ್ರ ಸೇರಿದ್ದಲ್ಲ. ಕಾವೇರಿ ತಮಿಳುನಾಡಿನ ಪಾಲನ್ನು ಕೂಡ ಹೊಂದಿದೆ. ತಮಿಳು ನಾಡಿನ ಮೂಲಕವೇ ಹೆಚ್ಚು ದೂರ ಕಾವೇರಿ ನದಿ ಹರಿಯುತ್ತದೆ ಎಂದು ಅವರು ಹೇಳಿದರು.
ಇದನ್ನೂ ಓದಿ : ಅದೊಂದು ಬಣ್ಣಿಸಲಾಗದ ಅನುಭೂತಿ : ಬಾಹ್ಯಾಕಾಶ ಪಯಣದ ಬಗ್ಗೆ ಶಿರಿಷಾ ಮಾತು