Advertisement

ಕೋವಿಡ್ ರಣಕೇಕೆ : ತಮಿಳುನಾಡಿನಲ್ಲಿ 2 ವಾರಗಳ ಕಾಲ ಕಠಿಣ ಲಾಕ್ ಡೌನ್ ಘೊಷಣೆ

09:01 AM May 08, 2021 | Team Udayavani |

ಚೆನ್ನೈ : ದಿನೇ ದಿನೇ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಎರಡು ವಾರಗಳ ಕಾಲ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ.

Advertisement

ರಾಜ್ಯದಲ್ಲಿ ಸೋಂಕಿಗೆ ಒಳಗಾಗುತ್ತಿರುವವರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಮೇ 10 ರಿಂದ 24 ರವರೆಗೆ ಒಟ್ಟು 14 ದಿನಗಳ ಕಾಲ (ಎರಡು ವಾರ) ಕಠಿಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.

ತಮಿಳುನಾಡಿನಲ್ಲಿ ದಿನಕ್ಕೆ 26,465 ಹೊಸ ಕೋವಿಡ್ ಪ್ರಕರಣಗಳು ಬಂದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಪ್ರಸ್ತುತ ತಲಾ ಒಂದು ಲಕ್ಷಕ್ಕೂ ಹೆಚ್ಚು ಸಕ್ರಿಯ ಕೋವಿಡ್ -19 ಪ್ರಕರಣಗಳನ್ನು ಹೊಂದಿರುವ 12 ರಾಜ್ಯಗಳಲ್ಲಿ ತಮಿಳುನಾಡು ಕೂಡ ಇದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next