ಚೆನ್ನೈ: ಮೇಕೆದಾಟು ಆಣೆಕಟ್ಟು ಯೋಜನೆ ಇದೀಗ ಕರ್ನಾಟಕ ಮತ್ತು ತಮಿಳುನಾಡು ಬಿಜೆಪಿಯ ಪ್ರತಿಷ್ಠೆಯ ವಿಚಾರವಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಯೋಜನೆ ಕಾರ್ಯರೂಪಕ್ಕೆ ತರುವ ಬಗ್ಗೆ ಮಾತನಾಡುತ್ತಿದ್ದರೆ, ತಮಿಳು ನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಯಾರೂ ಉಪವಾಸ, ಪ್ರತಿಭಟನೆ ಮಾಡಿದರೂ ನಾವು ಮೇಕೆದಾಟು ಯೋಜನೆ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರು. ಇದೀಗ ಅಣ್ಣಾಮಲೈ ಹೇಳಿಕೆ ನೀಡಿದ್ದು, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವೇ ಇದ್ದರೂ ಸಹ ನಮ್ಮ ಹೋರಾಟ ಮುಂದುವರಿಯುತ್ತಿದೆ. ಕೇಂದ್ರದ ಮೋದಿ ಸರ್ಕಾರ ನಮ್ಮ ಬೇಡಿಕೆಯನ್ನೇ ಪರಿಗಣಿಸುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ವ್ಯವಹಾರದ ಲೆಕ್ಕ ಪತ್ರಗಳಲ್ಲಿ ಅನುಮಾನ ಬಂದಾಗ ಈ ರೀತಿ ದಾಳಿ ಸಹಜ: ಮಾಧುಸ್ವಾಮಿ
ಕರ್ನಾಟಕ ಕೆಡರ್ ನ ಐಪಿಎಸ್ ಅಧಿಕಾರಿಯಾಗಿದ್ದ ಕೆ. ಅಣ್ಣಾಮಲೈ, ಕರ್ನಾಟಕದ ಮೂರು ಪಕ್ಷದ ವಿರುದ್ದವೂ ನಾವು ಹೋರಾಟ ಮಾಡುತ್ತೇವೆ ಎಂದಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತು ಎಚ್.ಡಿ. ಕುಮಾರಸ್ವಾಮಿ ವಿರುದ್ದ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮಿಳುನಾಡಿನ ಮಕ್ಕಳು ಒಂದಾಗಿ ಹೋರಾಟ ಮಾಡೋಣ ಎಂದು ತಮಿಳುನಾಡಿನ ಜನರಿಗೆ ಕರೆ ನೀಡಿರುವ ಅವರು, ನಮ್ಮ ಹೋರಾಟಕ್ಕೆ ಕಾಂಗ್ರೆಸ್‌ನವರು ಬೆಂಬಲ ಕೊಟ್ಟಿಲ್ಲ. ಕಮಲ್ ಹಾಸನ್ ಸಹ ಬೆಂಬಲಿಸಿಲ್ಲ. ಎಸಿ ಕೊಠಡಿಗಳಲ್ಲಿ ಕುಳಿತವರು ಈ ಹೋರಾಟವನ್ನು ಬೆಂಬಲಿಸುತ್ತಿಲ್ಲ ಎಂದು ಅಣ್ಣಾಮಲೈ ಕಿಡಿಕಾರಿದ್ದಾರೆ.