Advertisement

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ನಾಳೆ ಉಡುಪಿಗೆ

06:54 PM Feb 26, 2023 | Team Udayavani |

ಉಡುಪಿ : ಕರ್ನಾಟಕ ವಿಧಾನಸಭಾ ಚುನಾವಣೆಯ ರಾಜ್ಯ ಸಹ ಉಸ್ತುವಾರಿಯಾಗಿ ನಿಯೋಜನೆಗೊಂಡಿರುವ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಫೆ.27ರ ಬೆಳಗ್ಗೆ 9.30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಆಗಮಿಸಲಿದ್ದು, ಉಡುಪಿಯ 5 ವಿಧಾನಸಭಾ ಕ್ಷೇತ್ರದಾದ್ಯಂತ ಸಂಚರಿಸಲಿರುವ 5 ‘ಪ್ರಗತಿ ರಥ’ಗಳಿಗೆ ಚಾಲನೆ ನೀಡಲಿದ್ದಾರೆ.

Advertisement

ಮಧ್ಯಾಹ್ನ 3 ಗಂಟೆಗೆ ಕಾರ್ಕಳದಲ್ಲಿ ನಡೆಯುವ ಬೃಹತ್ ಬೈಕ್ ಜಾಥಾದಲ್ಲಿ ಭಾಗವಹಿಸಿ, ಸಂಜೆ 4 ಗಂಟೆಗೆ ಅಜೆಕಾರಿನಲ್ಲಿ ನಡೆಯುವ ಉಡುಪಿ ಜಿಲ್ಲಾ ಮಟ್ಟದ ‘ಯುವ ಮೋರ್ಚಾ ಸಮಾವೇಶ’ದಲ್ಲಿ ಭಾಗಿಯಾಗಲಿದ್ದಾರೆ.

ಸಚಿವ ವಿ.ಸುನಿಲ್ ಕುಮಾರ್, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ, ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್ ಕೆ.ಸಿ. ಸಹಿತ ರಾಜ್ಯ ಮತ್ತು ಜಿಲ್ಲಾ ನಾಯಕರು ಭಾಗವಹಿಸಲಿದ್ದಾರೆ.

ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next