Advertisement

ತಮಿಳುನಾಡು ಸಿಎಂ ಸ್ಟಾಲಿನ್ ಗೆ ಕೋವಿಡ್ ಪಾಸಿಟಿವ್; ಆಸ್ಪತ್ರೆಗೆ ದಾಖಲು

01:32 PM Jul 14, 2022 | Team Udayavani |

ಚೆನ್ನೈ : ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಕೋವಿಡ್ -19 ಪಾಸಿಟಿವ್ ಪರೀಕ್ಷೆ ನಡೆಸಿದ ಎರಡು ದಿನಗಳ ನಂತರ ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisement

ಕೋವಿಡ್ ಸಂಬಂಧಿತ ರೋಗಲಕ್ಷಣಗಳ ತಪಾಸಣೆ ಮತ್ತು ವೀಕ್ಷಣೆಗಾಗಿ ಮುಖ್ಯಮಂತ್ರಿಯನ್ನು ದಾಖಲಿಸಲಾಗಿದೆ ಎಂದು ಕಾವೇರಿ ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ. ಸ್ಟಾಲಿನ್ ಮಂಗಳವಾರ ಪಾಸಿಟಿವ್ ಪರೀಕ್ಷೆ ನಡೆಸಿದ್ದರು.

ಅವರು ಟ್ವೀಟ್‌ನಲ್ಲಿ, “ಇಂದು ಆಯಾಸವಿತ್ತು ಮತ್ತು ಪರೀಕ್ಷೆಯಲ್ಲಿ ಕೋವಿಡ್ -19 ದೃಢೀಕರಣದ ನಂತರ ನಾನು ನನ್ನನ್ನು ಪ್ರತ್ಯೇಕಿಸಿಕೊಂಡಿದ್ದೇನೆ” ಎಂದು ಹೇಳಿಕೊಂಡಿದ್ದರು. “ನಾವೆಲ್ಲರೂ ಮಾಸ್ಕ್ ಧರಿಸಿ ಮತ್ತು ಲಸಿಕೆ ಹಾಕಿಸಿಕೊಳ್ಳುವ ಮೂಲಕ ಸುರಕ್ಷಿತವಾಗಿರೋಣ” ಎಂದು ಅವರು ಹೇಳಿದರು.

ಇದನ್ನೂ ಓದಿ : ಭಾರತದಲ್ಲಿ 145 ದಿನಗಳ ಬಳಿಕ 20,000 ಗಡಿ ದಾಟಿದ ಕೋವಿಡ್ ಪ್ರಕರಣ, 38 ಸಾವು

Advertisement

Udayavani is now on Telegram. Click here to join our channel and stay updated with the latest news.

Next