ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ, ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಶುಕ್ರವಾರ(ಜೂನ್ 18) ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ನಿವಾಸದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಕೂಡಾ ಉಪಸ್ಠಿತರಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಪಶ್ಚಿಮಬಂಗಾಳ: ಅಭಿಷೇಕ್ ಬ್ಯಾನರ್ಜಿಗೆ ಕಪಾಳಮೋಕ್ಷ ಮಾಡಿದ್ದ ವ್ಯಕ್ತಿ ನಿಗೂಢವಾಗಿ ಸಾವು!
ತಮಿಳುನಾಡು ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಡಿಎಂಕೆ ಜತೆ ಮೈತ್ರಿ ಮಾಡಿಕೊಂಡಿತ್ತು. ಚುನಾವಣೆಯಲ್ಲಿ ಡಿಎಂಕೆ ಭರ್ಜರಿ ಜಯಭೇರಿ ಗಳಿಸಿದ ನಂತರ ಇದೇ ಮೊದಲ ಬಾರಿಗೆ ಸ್ಟಾಲಿನ್ ಮತ್ತು ಸೋನಿಯಾಗಾಂಧಿ ಚರ್ಚೆ ನಡೆಸಿರುವುದಾಗಿ ವರದಿ ವಿವರಿಸಿದೆ.
ಮೈತ್ರಿ ಪಾಲುದಾರರಾಗಿರುವ ಕಾಂಗ್ರೆಸ್ ಪಕ್ಷ, ರಾಜ್ಯದಲ್ಲಿನ ನೂತನ ಸರ್ಕಾರದ ಹೊಸ ಯೋಜನೆಗಳು ಮತ್ತು ನೀತಿಗಳ ಬಗ್ಗೆ ಸೋನಿಯಾ ಗಾಂಧಿ ಜತೆ ಚರ್ಚೆ ನಡೆಸಲಾಯಿತು ಎಂದು ವರದಿ ಹೇಳಿದೆ.
“ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ನಾನು (ರಾಹುಲ್ ಗಾಂಧಿ) ಇಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ದುರ್ಗಾವತಿ ಸ್ಟಾಲಿನ್ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿರುವುದಾಗಿ” ರಾಹುಲ್ ಗಾಂಧಿ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದರು.
ಕೋವಿಡ್ ಪರಿಸ್ಥಿತಿ ನಿರ್ವಹಣೆ ಹಾಗೂ ರಾಜ್ಯಕ್ಕೆ ಅಗತ್ಯವಿರುವ ಹಣಕಾಸು ನೆರವಿನ ಹಿನ್ನೆಲೆಯಲ್ಲಿ ಎಂಕೆ ಸ್ಟಾಲಿನ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸುವುದು ನಿರ್ಧಾರವಾಗಿದೆ.