Advertisement
12578 ಮೈಸೂರು-ದರ್ಭಂಗಾ ಬಾಗಮತಿ ಎಕ್ಸ್‌ಪ್ರೆಸ್‌ನಲ್ಲಿದ್ದ ಪ್ರಯಾಣಿಕರನ್ನು ಅ.12ರ ಶನಿವಾರ ಬೆಳಿಗ್ಗೆ ಮತ್ತೊಂದು ವಿಶೇಷ ರೈಲಿಗೆ ವರ್ಗಾಯಿಸಲಾಯಿತು. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Related Articles
Advertisement
ರಕ್ಷಣಾ ಮತ್ತು ಪರಿಹಾರ ಕಾರ್ಯಗಳ ಮೇಲೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ನಿಗಾ ವಹಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಪ್ರಯಾಣಿಕರನ್ನು ಚೆನ್ನೈನ ಸರ್ಕಾರಿ ಸ್ಟಾನ್ಲಿ ವೈದ್ಯಕೀಯ ಕಾಲೇಜಿನಲ್ಲಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಭೇಟಿ ಮಾಡಿದರು. ಸಚಿವ ಅವದಿ ನೇಸರ್ ಹಾಗೂ ಉನ್ನತ ಅಧಿಕಾರಿಗಳು ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಮೈಸೂರು-ದರ್ಭಂಗಾ ಬಾಗಮತಿ ಎಕ್ಸ್‌ಪ್ರೆಸ್‌ನಲ್ಲಿದ್ದ ಪ್ರಯಾಣಿಕರು ತಮ್ಮ ಪ್ರಯಾಣ ಮುಂದುವರಿಸಲು ಮತ್ತೊಂದು ವಿಶೇಷ ರೈಲು ಅ.12ರ ಶನಿವಾರ ಮುಂಜಾನೆ ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದಿಂದ ಬೆಳಗ್ಗೆ 04.45ರ ಸುಮಾರಿಗೆ ಹೊರಟಿತು. ಪ್ರಯಾಣಿಕರಿಗೆ ಆಹಾರ ಮತ್ತು ನೀರನ್ನು ಒದಗಿಸಲಾಗಿದೆ ಎಂದು ರೈಲ್ವೆ ತಿಳಿಸಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳು ಮತ್ತು ಆಂಬ್ಯುಲೆನ್ಸ್‌ಗಳನ್ನು ಸ್ಥಳಕ್ಕೆ ರವಾನಿಸಲಾಗಿದ್ದು ರಕ್ಷಣ ಕಾರ್ಯ ಭರದಿಂದ ನಡೆಸಲಾಗುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.