Advertisement

ಕೋವಿಡ್ 19 ಎಫೆಕ್ಟ್: ಏಪ್ರಿಲ್ 30ರವರೆಗೆ ಲಾಕ್ ಡೌನ್ ಮುಂದುವರಿಕೆ: ತಮಿಳುನಾಡು ಘೋಷಣೆ

09:07 AM Apr 14, 2020 | Nagendra Trasi |

ಚೆನ್ನೈ: ಕೋವಿಡ್ 19 ವೈರಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 21 ದಿನಗಳ ಕಾಲ ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ್ದರು. ನಿಗದಿಯಂತೆ ಏ.14ರಂದು ಲಾಕ್ ಡೌನ್ ಅಂತ್ಯಗೊಳ್ಳಲಿದ್ದು, ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಸೋಮವಾರ, ಲಾಕ್ ಡೌನ್ ಅನ್ನು ಏಪ್ರಿಲ್ 30ರವರೆಗೆ ಮುಂದುವರಿಸುವುದಾಗಿ ಘೋಷಿಸಿದ್ದಾರೆ.

Advertisement

ಕೋವಿಡ್ 19 ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಈಗಾಗಲೇ ಮಹಾರಾಷ್ಟ್ರ, ಪಂಜಾಬ್, ಒಡಿಶಾ, ಪಶ್ಚಿಮಬಂಗಾಳ, ಕರ್ನಾಟಕ ಹಾಗೂ ತೆಲಂಗಾಣ ಲಾಕ್ ಡೌನ್ ಅನ್ನು ಏಪ್ರಿಲ್ 30ರವರೆಗೆ ಮುಂದುವರಿಸುವುದಾಗಿ ಘೋಷಿಸಿವೆ.

ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ನಡೆಸಿದ ಮಾತುಕತೆಯಂತೆ ಲಾಕ್ ಡೌನ್ ಮುಂದುವರಿಸಿರುವುದಾಗಿ ಪಿಟಿಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.

ಶನಿವಾರ ದೇಶದ 13 ಮುಖ್ಯಮಂತ್ರಿಗಳ ಜತೆ ನಾಲ್ಕು ಗಂಟೆಗಳ ಕಾಲ ವಿಡಿಯೋ ಕಾನ್ಫರೆನ್ಸ್ ಮೂಲಕ ದೀರ್ಘಾವಧಿ ಚರ್ಚೆ ನಡೆಸಿದ್ದರು. ಈ ಸಂದರ್ಭದಲ್ಲಿ ಏ.14ರಂದು ಮುಕ್ತಾಯಗೊಳ್ಳಲಿರುವ ಲಾಕ್ ಡೌನ್ ಅನ್ನು ಏ.30ರವರೆಗೆ ಮುಂದುವರಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿಕೊಂಡಿದ್ದರು. ಸೋಂಕು ತಡೆಯಲು ದೀರ್ಘಾಕಾಲದ ಲಾಕ್ ಡೌನ್ ಅಗತ್ಯ ಎಂದು ಈ ಸಂದರ್ಭದಲ್ಲಿ ಚರ್ಚಿಸಲಾಗಿದೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next