Advertisement

ತಮಿಳುನಾಡು: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, 8 ಸಾವು

11:43 PM Jul 29, 2023 | Team Udayavani |

ಕೃಷ್ಣಗಿರಿ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿನ ಫ‌ಝಯಪೆಟ್ಟಯ್‌, ಬೊಗನಪಲ್ಲಿ ಹಳ್ಳಿಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟವೊಂದು ಸಂಭವಿಸಿ 8 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ ಮೂವರು ಮಹಿಳೆಯರೂ ಸೇರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಘಟನೆಗೆ ಸಂತಾಪ ಸೂಚಿಸಿ, ಮೃತರ ಸಂಬಂಧಿಕರಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.

Advertisement

ಗಾಯಗೊಂಡವರು ತಲಾ 50,000 ರೂ. ಪಡೆಯಲಿದ್ದಾರೆ. ಘಟನೆಯಿಂದ ತಾನು ನೊಂದಿದ್ದೇನೆ, ಮೃತರ ಕುಟುಂಬಕ್ಕೆ ನೋವನ್ನು ಸಹಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್‌ ಮಾಡಿದ್ದಾರೆ. ಸದ್ಯ ತಮಿಳುನಾಡು ಪ್ರವಾಸದಲ್ಲಿರುವ ಕೇಂದ್ರ ಗೃಹಸಚಿವ ಅಮಿತ್‌ ಶಾ ಕೂಡ ಸಂತಾಪ ಸೂಚಿಸಿದ್ದಾರೆ. ಇನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌, ಪರಿಸ್ಥಿತಿಯನ್ನು ನಿಭಾಯಿಸಲು ಆಹಾರ ಮಂತ್ರಿ ಆರ್‌.ಚಕ್ರಪಾಣಿಯನ್ನು ನಿಯೋಜಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next