Advertisement

ಸಿಎಂ ಸ್ಟಾಲಿನ್‌ ವಿರುದ್ಧ ಡ್ರಗ್ಸ್‌ ದಂಧೆ ಆರೋಪ: ಅಣ್ಣಾಮಲೈ, ಪಳನಿಸ್ವಾಮಿ ವಿರುದ್ಧ ಕೇಸ್‌

11:27 PM Mar 14, 2024 | Team Udayavani |

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ವಿರುದ್ಧ ಮಾದಕ ವಸ್ತು ಕಳ್ಳಸಾಗಣೆ ಆರೋಪ ಮಾಡಿದ್ದ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಹಾಗೂ ಬಿಜೆಪಿ  ತಮಿಳುನಾಡು ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ವಿರುದ್ಧ ಮಾನಹಾನಿ ಪ್ರಕರಣ ದಾಖಲಾಗಿದೆ. ಚೆನ್ನೈನ ಸೆಷನ್ಸ್‌ ಕೋರ್ಟ್‌ನಲ್ಲಿ ಸರ್ಕಾರಿ ವಕೀಲ ಜಿ. ದೇವರಾಜನ್‌ ಅವರು ಈ ಇಬ್ಬರ ವಿರುದ್ಧವೂ ಪ್ರತ್ಯೇಕ ದೂರು ದಾಖಲಿಸಿದ್ದಾರೆ.

Advertisement

ತಮಿಳುನಾಡನ್ನು ಡ್ರಗ್‌ ಮುಕ್ತಗೊಳಿಸಲು ಸ್ಟಾಲಿನ್‌ ನೇತೃತ್ವದ ಸರಕಾರ ಅವಿರತವಾಗಿ ಶ್ರಮಿಸುತ್ತಿದೆ.

ಆದರೆ ಈ ಇಬ್ಬರು ನಾಯಕರು ಬೇಜವಾಬ್ದಾರಿಯಿಂದ ಮುಖ್ಯಮಂತ್ರಿಗಳ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿ, ಮುಖ್ಯಮಂತ್ರಿಗಳ ಗೌರವಕ್ಕೆ ಧಕ್ಕೆ ಮಾಡುತ್ತಿದ್ದಾರೆ ಎಂದು ಆಪಾದಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next