ಚೆನ್ನೈ : ‘ಡಿಎಂಕೆ ಫೈಲ್ಸ್’ಆರೋಪಗಳಿಗಾಗಿ ತಮಿಳುನಾಡು ಸರಕಾರ ಬುಧವಾರ ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದೆ. ಅಣ್ಣಾಮಲೈ ಅವರು ಮುಖ್ಯಮಂತ್ರಿ ಎಂಕೆ ಸ್ಟಾಲಿನ್‌ಗೆ ಮಾನಹಾನಿ ಮಾಡುತ್ತಿದ್ದಾರೆ ಎಂದು ಪಕ್ಷ ಆರೋಪಿಸಿದೆ.
2011ರಲ್ಲಿ ಚೆನ್ನೈ ಮೆಟ್ರೋ ಒಪ್ಪಂದವನ್ನು ಸರಿಪಡಿಸಲು ಎಂಕೆ ಸ್ಟಾಲಿನ್‌ಗೆ 200 ಕೋಟಿ ರೂ. ನೀಡಲಾಗಿದೆ ಎಂದು ಇತ್ತೀಚೆಗೆ ಅಣ್ಣಾಮಲೈ ಆರೋಪಿಸಿದ್ದರು. ಸ್ಟಾಲಿನ್ ಅವರ ಡಿಎಂಕೆ ನಾಯಕರು ಭ್ರಷ್ಟಾಚಾರದ ಮೂಲಕ 1.34 ಲಕ್ಷ ಕೋಟಿ ರೂ. ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಸ್ಟಾಲಿನ್ ಅವರ ಕುಟುಂಬ ಸದಸ್ಯರು ರಾಜ್ಯದಲ್ಲಿ ಹೂಡಿಕೆ ಮಾಡುತ್ತಿರುವ ದುಬೈ ಕಂಪನಿಯ ನಿರ್ದೇಶಕರು ಎಂದು ಆರೋಪಿಸಿದ್ದರು.
ಈ ಹಿಂದೆ ಡಿಎಂಕೆಯ ಲೀಗಲ್ ನೋಟಿಸ್ ನಂತರ ಕ್ಷಮೆ ಯಾಚಿಸಲು ನಿರಾಕರಿಸಿದ ಅಣ್ಣಾಮಲೈ ಅವರು ನ್ಯಾಯಾಲಯದಲ್ಲಿ ಪ್ರಕರಣವನ್ನು ಎದುರಿಸಲಿದ್ದಾರೆ ಎಂದು ಬಿಜೆಪಿ ಹೇಳಿದೆ.