Advertisement

ತಮಿಳುನಾಡಿನ ಗದ್ದುಗೆ ಯಾರಿಗೆ; ಗವರ್ನರ್ ಕೋರ್ಟ್ ತೀರ್ಪುಗಳ ಅಧ್ಯಯನ!

12:24 PM Feb 11, 2017 | Sharanya Alva |

ಚೆನ್ನೈ:ತಮಿಳುನಾಡಿನ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಯಾವುದೇ ವರದಿ ಕಳುಹಿಸಿದ್ದಾರೆ ಎಂಬ ವರದಿಯನ್ನು ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರು ಅಲ್ಲಗಳೆದಿದ್ದಾರೆ. ಆದರೆ ಸುಪ್ರೀಂಕೋರ್ಟ್ ತೀರ್ಪು ಬರುವವರೆಗೂ ಕಾದು ನೋಡುವ ತಂತ್ರಕ್ಕೆ ರಾಜ್ಯಪಾಲರು ಮೊರೆ ಹೋಗಿದ್ದಾರೆ ಎಂದು ಮೂಲಗಳು ತಿಳಿಸಿವೆ ಎಂದು ವರದಿ ಹೇಳಿದೆ.

Advertisement

ಶಶಿಕಲಾ ನಟರಾಜನ್ ವಿರುದ್ಧದ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪನ್ನು ಸುಪ್ರೀಂಕೋರ್ಟ್ ಮುಂದಿನ ವಾರ ನೀಡುವ ನಿರೀಕ್ಷೆ ಇದ್ದು, ಅಲ್ಲಿಯವರೆಗೆ ಶಶಿಕಲಾ ಕಾಯುವಂತೆ ಸೂಚನೆ ನೀಡಿದ್ದಾರೆಂದು ವರದಿ ವಿವರಿಸಿದೆ.

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿರುವ ಶಶಿಕಲಾ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿವೆ. ಮತ್ತೊಂದೆಡೆ ತಾನು ಶಶಿಕಲಾ ಅವರ ಒತ್ತಡದಿಂದ ರಾಜೀನಾಮೆ ನೀಡಿದ್ದು, ಅದನ್ನು ವಾಪಸ್ ಪಡೆಯಲು ಸಿದ್ಧನಿದ್ದೇನೆ ಎಂದು ಹೇಳುವ ಮೂಲಕ ಬಿಕ್ಕಟ್ಟು ಮತ್ತಷ್ಟು ಬಿಗಡಾಯಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರು ತಮಗೆ ಮುಂದಿನ ನಿರ್ಧಾರ ಕೈಗೊಳ್ಳಲು ಅನುಕೂಲವಾಗುವ ದೃಷ್ಟಿಯಿಂದ ಹಲವಾರು ಕೋರ್ಟ್ ತೀರ್ಪುಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.

Advertisement

Udayavani is now on Telegram. Click here to join our channel and stay updated with the latest news.

Next