Advertisement

ಕೋವಿಡ್‌ ಹೆಚ್ಚಳ: ತಮಿಳುನಾಡಿನ ಆಸ್ಪತ್ರೆಗಳಲ್ಲಿ ಮಾಸ್ಕ್‌ ಕಡ್ಡಾಯ

01:40 PM Apr 01, 2023 | Team Udayavani |

ಚೆನ್ನೈ: ಕೋವಿಡ್‌ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡುವವರಿಗೆ ಮಾಸ್ಕ್‌ ಕಡ್ಡಾಯಗೊಳಿಸಿ ತಮಿಳುನಾಡು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

Advertisement

ಭಾರತದಲ್ಲಿ ಕಳೆದ ಕೆಲ ದಿನಗಳಿಂದ ಕೋವಿಡ್‌ ಹೆಚ್ಚಾಗುತ್ತಿದೆ. ಇತ್ತೀಚೆಗೆ ಕೋವಿಡ್‌ ಪ್ರಕರಣಗಳ ಸಂಖ್ಯೆ 3 ಸಾವಿರ ಗಡಿದಾಟಿತ್ತು. ಕೋವಿಡ್‌ ಸೋಂಕು ಹರಡುವಿಕೆಯಿಂದ ಜನರನ್ನು ರಕ್ಷಿಸುವ ಸಲುವಾಗಿ ತಮಿಳುನಾಡು ಸರ್ಕಾರ ಆಸ್ಪತ್ರೆಗೆ ಹೋಗುವವರಿಗೆ ಮಾಸ್ಕ್‌ ಕಡ್ಡಾಯವಾಗಿ ಧರಿಸುವಂತೆ ಅದೇಶ ಹೊರಡಿಸಿದೆ.

ಈ ಬಗ್ಗೆ ಮಾತನಾಡಿರುವ ಆರೋಗ್ಯ ಸಚಿವ ಮಾ ಸುಬ್ರಮಣಿಯನ್, ಸರ್ಕಾರದ ಆದೇಶವು ಮುಂಚೂಣಿಯಲ್ಲಿರುವ ಕಾರ್ಮಿಕರು ಮತ್ತು ನಿವಾಸಿಗಳನ್ನು ಸೋಂಕಿನಿಂದ ರಕ್ಷಿಸುವ ಗುರಿಯನ್ನು ಹೊಂದಿದೆ. ವೈದ್ಯರು, ದಾದಿಯರು, ವೈದ್ಯಕೀಯ ಸಿಬ್ಬಂದಿ, ರೋಗಿಗಳು ಮತ್ತು ಸಂದರ್ಶಕರಿಗೆ ಮಾಸ್ಕ್‌ ಕಡ್ಡಾಯವಾಗಿ ಧರಿಸಲು ಸೂಚನೆ ನೀಡಲಾಗಿದೆ ಎಂದರು.

ಇದನ್ನೂ ಓದಿ: ಮೊದಲ ಪಂದ್ಯದಲ್ಲೇ ಗಾಯ: ಕೂಟದಿಂದಲೇ ಹೊರಬಿದ್ದರೆ ಕೇನ್ ವಿಲಿಯಮ್ಸನ್?

ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಮಾಸ್ಕ್‌ ಗಳನ್ನು ಧರಿಸಬೇಕು. ಪ್ರಸ್ತುತ ತಮಿಳುನಾಡು ಮಾತ್ರವಲ್ಲದೆ ಭಾರತದ ಹಲವು ಕಡೆ ಕೋವಿಡ್‌ ರೂಪಂತಾರ ವೈರಾಣು ಹರಡಿದೆ. ಇತರ ದೇಶಗಳಿಂದ ಆಗಮಿಸುವ ಪ್ರಯಾಣಿಕರು ರಾಜ್ಯದ ವಿಮಾನ ನಿಲ್ದಾಣಗಳಿಗೆ ಆಗಮಿಸಿದ ನಂತರ ಸ್ಕ್ರೀನಿಂಗ್‌ ಗೆ ಒಳಗಾಗಬೇಕು. ಕಳೆದ 24 ಗಂಟೆಗಳಲ್ಲಿ ತಮಿಳುನಾಡಿನಲ್ಲಿ 123 ಮಂದಿಗೆ ಕೋವಿಡ್‌ ಪಾಸಿಟಿವ್‌ ಕಾಣಿಸಿಕೊಂಡಿದೆ ಎಂದು ಹೇಳಿದರು.

Advertisement

ಕಳೆದ ಕೆಲ ದಿನಗಳಿಂದ ಕೋವಿಡ್‌ ಪ್ರಕರಣಗಳು ನಿಧಾನವಾಗಿ ಹೆಚ್ಚಾಗುತ್ತಿದೆ. ಈ ನಡುವೆ ತಮಿಳುನಾಡಿನಲ್ಲಿ ಆಸ್ಪತ್ರೆಗಳಲ್ಲಿ ಮಾಸ್ಕ್‌ ಕಡ್ಡಾಯವಾಗಿ ಧರಿಸುವ ಆದೇಶವನ್ನು ಹೊರಡಿಸಲಾಗಿದೆ.

ಶನಿವಾರ (ಏ.1 ರಂದು) ಭಾರತದಲ್ಲಿ 2,994 ಕೋವಿಡ್‌ ಪ್ರಕರಣಗಳು ಪತ್ತೆಯಾಗಿದೆ.

 

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next