Advertisement

ಪ್ರೀತಿಸಲು ನಿರಾಕರಿಸಿದ ವಿದ್ಯಾರ್ಥಿನಿಗೆ 14 ಬಾರಿ ಇರಿದ ಯುವಕ, ಆರೋಪಿ ಶವವಾಗಿ ಪತ್ತೆ!

11:32 AM Jun 01, 2022 | Team Udayavani |

ಚೆನ್ನೈ: ತನ್ನನ್ನು ಪ್ರೀತಿಸಲು ನಿರಾಕರಿಸಿದ ವಿದ್ಯಾರ್ಥಿನಿಯನ್ನು 22 ವರ್ಷದ ಯುವಕನೊಬ್ಬ 14 ಬಾರಿ ಇರಿದ ಘಟನೆ ತಮಿಳುನಾಡಿನ ತಿರುಚ್ಚಿಯಲ್ಲಿ ನಡೆದಿದೆ. ಆರೋಪಿಯನ್ನು ಕೇಶವನ್ (22ವರ್ಷ) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಏನಿದು ಘಟನೆ?:

ತಿರುಚ್ಚಿಯ ಅಥಿಕುಳಂ ನಿವಾಸಿಯಾಗಿರುವ ಈ ವಿದ್ಯಾರ್ಥಿನಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಈಕೆ ತನ್ನ ಸಂಬಂಧಿಯನ್ನು ಭೇಟಿಯಾಗಲು ತೆರಳುತ್ತಿದ್ದ ಸಂದರ್ಭದಲ್ಲಿ ಆರೋಪಿ ಕೇಶವನ್ನು ವಿದ್ಯಾರ್ಥಿನಿಯನ್ನು ರೈಲ್ವೆ ಮೇಲ್ಸೆತುವೆ ಬಳಿ ತಡೆದು ನಿಲ್ಲಿಸಿದ್ದ.

ಇದನ್ನೂ ಓದಿ:ವಾಣಿಜ್ಯ ಬಳಕೆಯ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ ಇಳಿಕೆ; ಜೂನ್ 1ರಿಂದಲೇ ಅನ್ವಯ

ಕೇಶವನ್ ಆಕೆ ಬಳಿ ತನ್ನ ಪ್ರೀತಿಯನ್ನು ಒಪ್ಪಿಕೊಳ್ಳುವಂತೆ ಹೇಳಿದ್ದ. ಆದರೆ ಆಕೆ ತಾನು ನಿನ್ನನ್ನು ಪ್ರೀತಿಸುವುದಿಲ್ಲ ಎಂದು ಹೇಳಿದಾಗ, ಚೂರಿಯಿಂದ 14 ಬಾರಿ ಇರಿದಿದ್ದ. ಈ ವೇಳೆಯಲ್ಲಿ ಆಕೆ ಕೂಗಿಕೊಂಡಾಗ ಆರೋಪಿ ಸ್ಥಳದಿಂದ ಪರಾರಿಯಾಗಿದ್ದ.

Advertisement

ರಕ್ತದ ಮಡುವಿನಲ್ಲಿ ಬಿದ್ದಿದ್ದ ಬಾಲಕಿಯನ್ನು ಗಮನಿಸಿದ ಪ್ರಯಾಣಿಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಚಿಂತಾಜನಕ ಸ್ಥಿತಿಯಲ್ಲಿರುವ ಬಾಲಕಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ತಿಳಿಸಿದೆ.

ಆರೋಪಿಯನ್ನು ತಿರುಚ್ಚಿಯ ಪೋತಮೆಟ್ಟುಪಟ್ಟಿ ನಿವಾಸಿ ಎಂದು ಗುರುತಿಸಲಾಗಿದ್ದು, ಆತನ ಬಂಧನಕ್ಕಾಗಿ ಮೂರು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಮಂಗಳವಾರ ರಾತ್ರಿ ಕೇಶವನ್ ಶವ ರೈಲ್ವೆ ಹಳಿ ಮೇಲೆ ಪತ್ತೆಯಾಗಿರುವುದಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಕೇಶವನ್ ತಂದೆ ಮಗನ ಶವದ ಗುರುತು ಪತ್ತೆ ಹಚ್ಚಿದ್ದು, ಸ್ಥಳದಲ್ಲಿದ್ದ ಆತನ ಮೊಬೈಲ್ ಫೋನ್ ಅನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೇಶವನ್ 2021ರ ಜೂನ್ ನಲ್ಲಿ ಈ ಬಾಲಕಿಯನ್ನು ಅಪಹರಿಸಿದ್ದ ಪ್ರಕರಣದಲ್ಲಿ ಪೋಕ್ಸೋ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದು, ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಗೊಂಡಿರುವುದಾಗಿ ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next