Advertisement

Corruption Case: ತಮಿಳುನಾಡು ಉನ್ನತ ಶಿಕ್ಷಣ ಸಚಿವ ಪೊನ್ಮುಡಿಗೆ 3 ವರ್ಷ ಜೈಲು ಶಿಕ್ಷೆ

12:25 PM Dec 21, 2023 | Team Udayavani |

ಚೆನ್ನೈ: 1.75 ಕೋಟಿ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ರಾಜ್ಯದ ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಅವರಿಗೆ ಮದ್ರಾಸ್ ಹೈಕೋರ್ಟ್ ಗುರುವಾರ 3 ವರ್ಷಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ.

Advertisement

ನ್ಯಾಯಾಲಯ ಪೊನ್ಮುಡಿ ಮತ್ತು ಅವರ ಪತ್ನಿಗೆ ತಲಾ 50 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಮಂಗಳವಾರ, ಮದ್ರಾಸ್ ಹೈಕೋರ್ಟ್ ಈ ಪ್ರಕರಣದಲ್ಲಿ ಪೊನ್ಮುಡಿ ಮತ್ತು ಅವರ ಪತ್ನಿಯನ್ನು ದೋಷಿ ಎಂದು ಘೋಷಿಸಿತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿತು.

2006 ರಿಂದ 2011 ರ ಅವಧಿಯಲ್ಲಿ ಪೊನ್ಮುಡಿ ಅವರು ಡಿಎಂಕೆ ನೇತೃತ್ವದ ಆಡಳಿತದಲ್ಲಿ ಸಚಿವರಾಗಿದ್ದಾಗ ಅವರ ಹೆಸರಲ್ಲಿ ಮತ್ತು ಅವರ ಪತ್ನಿಯ ಹೆಸರಿನಲ್ಲಿ ಸುಮಾರು 65.99% ಕ್ಕೂ ಹೆಚ್ಚಿನ ಆದಾಯ ಗಳಿಸಿದ್ದರು.

ಖೇಚ್ಚಿನ ಆದಾಯ ಗಳಿಸಿದ್ದರೂ 2016 ರಲ್ಲಿ ವಿಲ್ಲುಪುರಂನ ವಿಚಾರಣಾ ನ್ಯಾಯಾಲಯವು ಖುಲಾಸೆಗೊಳಿಸಿತು. ಮಂಗಳವಾರ, ಹೈಕೋರ್ಟ್ ಆ ತೀರ್ಪನ್ನು ರದ್ದುಗೊಳಿಸಿತು ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ, 1988 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧದ ಆರೋಪವು ಇಬ್ಬರೂ ಆರೋಪಿಗಳ ವಿರುದ್ಧ ಸಾಬೀತಾಗಿದೆ.

Advertisement

ಇದನ್ನೂ ಓದಿ: Ullala; ತಲಪಾಡಿ ಗಡಿಭಾಗದಲ್ಲಿ ಆರೋಗ್ಯ ಇಲಾಖೆಯಿಂದ ಕೋವಿಡ್ ಜಾಗೃತಿ ಕಾರ್ಯಕ್ರಮ

Advertisement

Udayavani is now on Telegram. Click here to join our channel and stay updated with the latest news.

Next