ತಮಿಳುನಾಡು: ಜೈಲಿನಲ್ಲಿದ್ದ ಖೈದಿಗಳನ್ನು ವಿಚಾರಣೆ ನಡೆಸುವ ವೇಳೆ ಹಲ್ಲೆ ನಡೆಸಿ ಅವರ ಹಲ್ಲುಗಳನ್ನು ಕಿತ್ತು ಹಾಕಿದ ಘಟನೆಗೆ ಸಂಬಂಧಿಸಿ ತಮಿಳುನಾಡಿನ ಐಪಿಎಸ್ ಅಧಿಕಾರಿಯನ್ನು ಕರ್ತವ್ಯದಿಂದ ಅಮಾನತುಗೊಳಿಸಿದ ಘಟನೆ ನಡೆದಿದೆ.
ತಿರುನಲ್ವೇಲಿ ಜಿಲ್ಲೆಯ ಅಂಬಾಸಮುದ್ರಂನಲ್ಲಿ ಸಹಾಯಕ ಪೊಲೀಸ್ ಅಧಿಕಾರಿಯಾಗಿದ್ದ ಬಲ್ವೀರ್ ಸಿಂಗ್ ಈಗ ಅಮಾನತುಗೊಂಡಿರುವ ಐಪಿಎಸ್ ಅಧಿಕಾರಿ.
ತಿರುನಲ್ವೇಲಿ ಜಿಲ್ಲೆಯ ಅಂಬಾಸಮುದ್ರಂನಲ್ಲಿ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ನಿಯೋಜನೆಗೊಂಡಿದ್ದ 2020 ರ ಬ್ಯಾಚ್ ಐಪಿಎಸ್ ಅಧಿಕಾರಿ ಬಲ್ವೀರ್ ಸಿಂಗ್ ಪ್ರಕರಣವೊಂದರಲ್ಲಿ ಜೈಲಿನಲ್ಲಿರುವ ಕೈದಿಗಳನ್ನು ವಿಚಾರಣೆ ನಡೆಸುವ ಹಿನ್ನೆಲೆಯಲ್ಲಿ ಅವರ ಮೇಲೆ ಗಂಭೀರ ಹಲ್ಲೆ ನಡೆಸಿದ್ದು ಅಲ್ಲದೆ ಕಟಿಂಗ್ ಪ್ಲೇಯರ್ ನಿಂದ ಐವರ ಹಲ್ಲುಗಳನ್ನು ಕಿತ್ತು ಹಾಕಿದ್ದಾರೆ, ಮುಖ್ಯ ವಿಷವೇನೆಂದರೆ ಈ ಪ್ರಕರಣದ ಪ್ರಮುಖ ಆರೋಪಿ ಜಾಮೀನಿನ ಮೇಲೆ ಹೊರಗಿದ್ದು ಕೆಲ ಮಂದಿಯಷ್ಟೇ ಜೈಲಿನಲ್ಲಿದ್ದರು ಎನ್ನಲಾಗಿದೆ.
ಅಷ್ಟು ಮಾತ್ರವಲ್ಲದೆ ಐಪಿಎಸ್ ಅಧಿಕಾರಿಯ ಮೇಲೆ ಹಲವು ಖೈದಿಗಳು ದೂರು ನೀಡಿದ್ದು ತಮ್ಮ ನೋವುಗಳನ್ನು ಹಂಚಿಕೊಂಡಿದ್ದಾರೆ, ಈ ಎಲ್ಲ ಪ್ರಕರಣಕ್ಕೆ ಸಂಬಂಧಿಸಿ ಹಿರಿಯ ಅಧಿಕಾರಿಗಳು ಈ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ವಿಚಾರಣೆ ನೆಪದಲ್ಲಿ ಆರೋಪಿಯ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವುದು ದುರದೃಷ್ಟಕರ ಹಾಗಾಗಿ ಐಪಿಎಸ್ ಅಧಿಕಾರಿ ಬಲ್ವೀರ್ ಸಿಂಗ್ ಅವರನ್ನು ಅಮಾನತುಗೊಳಿಸುವಂತೆ ಅಧಿಕಾರಿಗಳಿಗೆ ಆದೇಶಿಸಿರುವುದಾಗಿ ಹೇಳಿದ್ದಾರೆ.
ಸದ್ಯ ಕೈದಿಗಳ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವ ಐಪಿಎಸ್ ಅಧಿಕಾರಿಯನ್ನು ಅಮಾನತುಗೊಳಿಸುವಂತೆ ತಮಿಳುನಾಡು ಸಿಎಂ ನೊಟೀಸ್ ಜಾರಿ ಮಾಡಿದ್ದು ತನಿಖೆ ಮುಂದುವರೆದಿದೆ.
ಇದನ್ನೂ ಓದಿ: ಮಂಗಳೂರು : ಅಪಾರ್ಟ್ಮೆಂಟ್ ನ 9 ನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು