Advertisement

Heavy Rain: ತಮಿಳುನಾಡಿನಲ್ಲಿ ವರುಣನ ಅಬ್ಬರಕ್ಕೆ 3 ಮೃತ್ಯು, ಶಾಲಾ-ಕಾಲೇಜುಗಳಿಗೆ ರಜೆ

09:47 AM Dec 19, 2023 | sudhir |

ಚೆನ್ನೈ: ದಕ್ಷಿಣ ತಮಿಳುನಾಡಿನಲ್ಲಿ ಮಂಗಳವಾರವೂ ವರುಣನ ಅಬ್ಬರ ಜೋರಾಗಿದ್ದು ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇಂದು ನಾಲ್ಕು ಜಿಲ್ಲೆಗಳಾದ ಕನ್ಯಾಕುಮಾರಿ, ತಿರುನಲ್ವೇಲಿ, ತೂತುಕುಡಿ ಮತ್ತು ತೆಂಕಶಿಯಲ್ಲಿ ಹಳದಿ ಅಲರ್ಟ್ ಘೋಷಿಸಿದೆ.

Advertisement

ವರದಿಯ ಪ್ರಕಾರ, ರಾಜ್ಯಾದ್ಯಂತ ಮಳೆಗೆ ಮೂವರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದೆ. ಉತ್ತರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ ಎಂದು ಐಎಂಡಿ ತಿಳಿಸಿದೆ.

ಟುಟಿಕೋರಿನ್ ಜಿಲ್ಲೆಯ ಶ್ರೀವೈಕುಂಟಂ ರೈಲು ನಿಲ್ದಾಣದಲ್ಲಿ ಕಳೆದ 24 ಗಂಟೆಗಳಿಂದ ಸುಮಾರು 500 ಪ್ರಯಾಣಿಕರು ಸಿಕ್ಕಿಹಾಕಿಕೊಂಡಿದ್ದು, ಭಾರೀ ಮಳೆಯ ನಂತರ ನಿಲ್ದಾಣವು ಜಲಾವೃತವಾಗಿದೆ ಮತ್ತು ರೈಲು ಹಳಿಗಳು ಹಾನಿಗೊಳಗಾಗಿವೆ. ಭಾರತೀಯ ವಾಯುಪಡೆಯು ಸಿಕ್ಕಿಬಿದ್ದ ರೈಲು ಪ್ರಯಾಣಿಕರಿಗೆ ಏರ್-ಡ್ರಾಪಿಂಗ್ ಪರಿಹಾರ ಸಾಮಗ್ರಿಗಳನ್ನು ಪ್ರಾರಂಭಿಸಿದೆ ಮತ್ತು ಅಸ್ವಸ್ಥ ಪ್ರಯಾಣಿಕರನ್ನು IAF ಹೆಲಿಕಾಪ್ಟರ್‌ಗಳ ಮೂಲಕ ಏರ್ ಲಿಫ್ಟ್ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.

ದಕ್ಷಿಣ ತಮಿಳುನಾಡಿನ 39 ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಗದ್ದೆಗಳು, ರಸ್ತೆಗಳು ಮತ್ತು ಸೇತುವೆಗಳು ಮುಳುಗಡೆಯಾಗಿದ್ದು, ಅನೇಕ ವಸತಿ ಕಾಲೋನಿಗಳು ನೀರಿನಿಂದ ತುಂಬಿವೆ. ಕೆರೆಗಳು ಒಡೆದು ಪ್ರವಾಹ ಉಂಟಾದ ಪರಿಣಾಮ ಹಲವಾರು ಪ್ರದೇಶಗಳ ಸಂಪರ್ಕ ಕಡಿತಗೊಂಡಿದೆ.

ಮಳೆಯ ಹಿನ್ನೆಲೆಯಲ್ಲಿ ತಿರುನಲ್ವೇಲಿ ಮತ್ತು ತೂತುಕುಡಿ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅದೇ ರೀತಿ ಕನ್ಯಾಕುಮಾರಿ ಮತ್ತು ತೆಂಕಶಿ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ.

Advertisement

ಮಳೆಯಿಂದಾಗಿ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿದ್ದು. ಹಲವಾರು ಪ್ರದೇಶಗಳಲ್ಲಿ ಮೊಬೈಲ್ ಫೋನ್ ಸಂಪರ್ಕಕ್ಕೆ ತೊಂದರೆ ಉಂಟಾಗಿದೆ.
ಹವಾಮಾನ ಇಲಾಖೆಯ ಪ್ರಕಾರ, ದಕ್ಷಿಣ ತಮಿಳುನಾಡು ಕರಾವಳಿಯುದ್ದಕ್ಕೂ ಮತ್ತು ಮನ್ನಾರ್ ಗಲ್ಫ್, ಕೊಮೊರಿನ್ ಪ್ರದೇಶ, ಲಕ್ಷದ್ವೀಪ ಪ್ರದೇಶದಲ್ಲಿ ಗಂಟೆಗೆ 40-45 ಕಿಲೋಮೀಟರ್ ವೇಗದಲ್ಲಿ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹೇಳಲಾಗಿದ್ದು ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ರಾಮ ಮಂದಿರ ಉದ್ಘಾಟನೆಗೆ ಬರಬೇಡಿ… ಅಡ್ವಾಣಿ, ಜೋಶಿ ಬಳಿ ಮನವಿ ಮಾಡಿದ ರಾಮ ಮಂದಿರ ಟ್ರಸ್ಟ್

Advertisement

Udayavani is now on Telegram. Click here to join our channel and stay updated with the latest news.

Next