Advertisement

ತಮಿಳುನಾಡು: ಮಗುವಿಗೆ ಜನ್ಮ ನೀಡಿದ ಪ್ರಥಮ ಪಿಯು ವಿದ್ಯಾರ್ಥಿನಿ

08:56 PM Sep 07, 2022 | Team Udayavani |

ಚೆನ್ನೈ: ತಮಿಳುನಾಡಿನ ಚಿದಂಬರಂ ಬಳಿಯ ಸರ್ಕಾರಿ ಶಾಲೆಯ ಪ್ರಥಮ ಪಿಯು ವಿದ್ಯಾರ್ಥಿನಿಯೊಬ್ಬಳಿಗೆ ಹೆರಿಗೆಯಾಗಿದ್ದು, ಮಗುವಿನ ಶವವನ್ನು ಶಾಲೆಯ ಶೌಚಾಲಯದ ಬಳಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆಯ ಕುರಿತು ಕಡಲೂರು ಪೊಲೀಸರು ತನಿಖೆ ಆರಂಭಿಸಿದ್ದಾರೆ.

Advertisement

ಅಪ್ರಾಪ್ತ ಬಾಲಕಿ ಗರ್ಭಧರಿಸಲು ಕಾರಣರಾದವರ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಶಾಲೆಯ ಶೌಚಾಲಯದ ಬಳಿ ಶಿಶುವಿನ ಶವವನ್ನು ಶಾಲಾ ಅಧಿಕಾರಿಗಳು ಕಂಡು ಭುವನಗಿರಿ ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ತನಿಖೆ ಆರಂಭಿಸಿದ್ದು, ಪತ್ತೆಯಾಗಿದ್ದು, ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿರುವುದಾಗಿ ಒಪ್ಪಿಕೊಂಡಿದ್ದಾಳೆ.ಹೊಟ್ಟೆ ನೋವು ಕಾಣಿಸಿಕೊಂಡು ಶೌಚಾಲಯಕ್ಕೆ ಹೋಗಿ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಹೇಳಿದ್ದಾಳೆ. ಯಾವುದೇ ಸಹಾಯವಿಲ್ಲದೆ ಹೆರಿಗೆ ಮಾಡಿದ್ದರಿಂದ ಮಗು ಸಾವನ್ನಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿ ಪೆನ್ನಿನಿಂದ ಹೊಕ್ಕುಳಬಳ್ಳಿಯನ್ನು ಕತ್ತರಿಸಿ ಮತ್ತೆ ತರಗತಿಗೆ ಬಂದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ತಾನು ಗರ್ಭಿಣಿಯಾಗಿರುವ ವಿಚಾರವನ್ನು ಶಾಲೆಯಲ್ಲಿ ಅಥವಾ ಕುಟುಂಬದಲ್ಲಿ ಯಾರಿಗೂ ಹೇಳಿಲ್ಲ ಎಂದು ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ. ಆಕೆ ಗರ್ಭಧರಿಸಲು ಕಾರಣವಾದ ವ್ಯಕ್ತಿಯ ಪತ್ತೆಗಾಗಿ ಆಕೆಯ ಸಂಬಂಧಿಕರು ಮತ್ತು ಸ್ಥಳೀಯ ಜನರು ಸೇರಿದಂತೆ ಹಲವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next