Advertisement

ತಮಿಳುನಾಡು ಸಂಕಷ್ಟ ಸೂತ್ರ ಪಾಲಿಸಬೇಕು: CM

11:12 PM Aug 12, 2023 | Team Udayavani |

ಮೈಸೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಈ ಬಾರಿ ಮಳೆಯ ಕೊರತೆಯಿಂದಾಗಿ ಜಲಾಶಯಗಳಲ್ಲಿ ಅಗತ್ಯವಿರುವಷ್ಟು ನೀರಿಲ್ಲ. ಹೀಗಾಗಿ,  ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳೂ ಸಂಕಷ್ಟ ಸೂತ್ರವನ್ನು ಪಾಲಿಸಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Advertisement

ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಹೋಗದೆ ಬೇರೆ ವಿಧಿಯಿಲ್ಲ ಎಂದು ತಮಿಳುನಾಡು ಸರಕಾರ ಹೇಳಿಕೆ ನೀಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರಿಂದ ಈ ಪ್ರತಿಕ್ರಿಯೆ ಹೊರಬಿದ್ದಿದೆ. ಕಾವೇರಿ ಕೊಳ್ಳದ ಪ್ರದೇಶದಲ್ಲಿ  ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಹೀಗಾಗಿ, ಎರಡೂ ರಾಜ್ಯಗಳು ಸಂಕಷ್ಟ  ಸೂತ್ರವನ್ನು ಪಾಲಿಸಬೇಕಾಗಿದೆ. ಕೇರಳ ಹಾಗೂ ಕೊಡಗು ಭಾಗದಲ್ಲಿ ಮಳೆ ಕಡಿಮೆಯಾಗಿರುವುದರಿಂದ ನಮ್ಮ ಜಲಾಶಯಗಳಲ್ಲಿ ನೀರು ಕಡಿಮೆ ಇದೆ. ಪರಿಸ್ಥಿತಿ ನೋಡಿಕೊಂಡು ನೀರು ಹರಿಸಲಾಗುವುದು ಎಂದು ಅವರು ಶನಿವಾರ ಇಲ್ಲಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರಿಗೆ ತಿಳಿಸಿದರು.

ನಮಗೇ ಮಳೆ ಕಡಿಮೆಯಾಗಿದೆ. ಜಲಾಶಯಕ್ಕೆ ನೀರಿನ ಒಳ ಹರಿವು ಕಡಿಮೆಯಾಗಿದೆ. ತಮಿಳುನಾಡು ತಗಾದೆ ತೆಗೆದಿದೆ. ನಮ್ಮಲ್ಲಿ ಬೆಳೆ ಪರಿಸ್ಥಿತಿ ನೋಡಿಕೊಳ್ಳಬೇಕು. ಸಂಕಷ್ಟ ಪರಿಸ್ಥಿತಿಯನ್ನು ಇಬ್ಬರೂ ಹಂಚಿಕೊಳ್ಳಬೇಕು ಎಂದು ಅವರು ಹೇಳಿದರು.

 

Advertisement

Udayavani is now on Telegram. Click here to join our channel and stay updated with the latest news.

Next