Advertisement

ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹಿಸಿ: ಖಾಲಿ ಕೊಡ ಪ್ರದರ್ಶನ

12:09 PM Jul 12, 2017 | Team Udayavani |

ಮೈಸೂರು: ಮುಂಗಾರು ವೈಫ‌ಲ್ಯದಿಂದ ಕಾವೇರಿ ಕಣಿವೆಯ ಜಲಾಶಯಗಳು ಭರ್ತಿಯಾಗದಿದ್ದರೂ ತಮಿಳುನಾಡಿಗೆ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿದ ಮೈಸೂರು ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ಸದಸ್ಯರು ಖಾಲಿಕೊಡಗಳನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.

Advertisement

ನಗರದ ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಮುಂಭಾಗ ಸೇರಿದ ಸಂಘದ ಸದಸ್ಯರು ಕಬಿನಿ ಹಾಗೂ ಕೆಆರ್‌ಎಸ್‌ ಜಲಾಶಯಗಳಿಂದ ತಮಿಳು ನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಕೂಡಲೇ ನಿಲ್ಲಿಸಿ ಈ ಭಾಗದ ನಾಲೆಗಳಿಗೆ ನೀರು ಹರಿಸಿ ರೈತರು, ಜಾನುವಾರುಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸಂಘದ ಅಧ್ಯಕ್ಷ ಬಿ.ಎ.ಶಿವಶಂಕರ್‌, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶೈಲಜಾ, ಉಪಾಧ್ಯಕ್ಷ ಬಸವರಾಜು, ಶ್ರೀಕಂಠ, ಡಿ.ಎನ್‌.ಸುರೇಶ್‌, ಬಾಬು, ಕುಮಾರ್‌, ಪ್ರಮೀಳಾ, ಉಷಾ, ಗೌರಮ್ಮ, ಪ್ರೇಮಾ, ರಮಾ, ಸುಕನ್ಯ, ಉಮಾದೇವಿ, ಆಶಾ ಇತರರು ಪ್ರತಿಭನೆಯಲ್ಲಿ ಭಾವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next