Advertisement
ಮೆಥಾನಲ್ ಮಿಶ್ರಿತ ‘ಅರಕ್ʼ ಮದ್ಯ ಪ್ಯಾಕೆಟ್ ಸೇವಿಸಿ ಜನರು ಅಸ್ವಸ್ಥಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. “ಕಲ್ಲಕುರಿಚಿಯಲ್ಲಿ ಕಲಬೆರಕೆ ಮದ್ಯ ಸೇವಿಸಿ ಸಾವನ್ನಪ್ಪಿರುವ ಸುದ್ದಿ ಕೇಳಿ ನನಗೆ ಆಘಾತ ಮತ್ತು ದುಃಖವಾಗಿದೆ. ಈ ಪ್ರಕರಣದ ಅಪರಾಧದಲ್ಲಿ ಭಾಗಿಯಾದವರನ್ನು ಬಂಧಿಸಲಾಗಿದೆ. ಇದನ್ನು ತಡೆಯಲು ವಿಫಲರಾದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ. ಸಮಾಜ ಹಾಳುಗೆಡುವ ಇಂತಹ ಕೃತ್ಯಗಳಲ್ಲಿ ಭಾಗಿಯಾದವರ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದರೆ ಕ್ರಮ ಕೈಗೊಳ್ಳಲಾಗುವುದುʼ ಎಂದು ಸಿಎಂ ಸ್ಟಾಲಿನ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
Related Articles
Advertisement
ಅಕ್ರಮ ಮದ್ಯ ಸೇವಿಸಿ ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರಿಗೆ 50 ಸಾವಿರ ಪರಿಹಾರವನ್ನು ತಮಿಳುನಾಡು ಸರ್ಕಾರ ಘೋಷಿಸಿದೆ.
ಸರ್ಕಾರದ ವಿರುದ್ಧ ಬಿಜೆಪಿ, ಎಐಎಡಿಎಂಕೆ ಟೀಕೆ
ಅಕ್ರಮ ಮದ್ಯದ ಬಗ್ಗೆ ಈ ಮೊದಲು ಮಾಹಿತಿ ನೀಡಿದ್ದರೂ ಕಡಿವಾಣ ಹಾಕುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ವಿಪಕ್ಷ ನಾಯಕ ಕೆ.ಪಳನಿಸ್ವಾಮಿ ಟೀಕಿಸಿದ್ದಾರೆ. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಮಾತನಾಡಿ, ಕಳೆದ ವರ್ಷ ಅಕ್ರಮ ಮದ್ಯ ಸೇವಿಸಿ 22 ಮಂದಿ ಮೃತಪಟ್ಟಿದ್ದರೂ ಇದರಿಂದ ಸರ್ಕಾರ ಪಾಠ ಕಲಿತಿಲ್ಲ ಎಂದು ಆರೋಪಿಸಿದರು.