Advertisement

Video: ಬೈಕಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಭೀಕರ ಅಪಘಾತ, ಐವರು ಸ್ಥಳದಲ್ಲೇ ಮೃತ್ಯು

11:31 PM Apr 10, 2024 | Team Udayavani |

ಚೆನ್ನೈ: ತಮಿಳುನಾಡಿನ ಮದುರೈ ಸಮೀಪ ತಲವೈಪುರ ಬಳಿ ಬುಧವಾರ ಚಾಲಕನ ನಿಯಂತ್ರಣ ತಪ್ಪಿದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ, ಒಂದೇ ಕುಟುಂಬದ ನಾಲ್ವರು ಸೇರಿ 5 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Advertisement

ಕಾರಿಗೆ ಅಡ್ಡಲಾಗಿ ಬಂದ ಅಪರಿಚಿತ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋದ ಕಾರು ಚಾಲಕ, ಏಕಾಏಕಿ ಬ್ರೇಕ್‌ ಹಾಕಿದ್ದು, ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಈ ವೇಳೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ಅಸುನೀಗಿದ್ದಾರೆ.

ಆ್ಯಕ್ಸಿಡೆಂಟ್‌ ಆಗಿರುವ ವಿಡಿಯೋ ಈಗ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next