Advertisement

ಇವಿಎಂಗಳ ವಿಧಿವಿಜ್ಞಾನ ಪರೀಕ್ಷೆಗೆ ಆದೇಶ

01:11 AM May 08, 2017 | Team Udayavani |

ಮುಂಬಯಿ: ವಿದ್ಯುನ್ಮಾನ ಮತಯಂತ್ರಗಳ ವಿಶ್ವಾಸಾರ್ಹತೆ ಬಗೆಗಿನ ಅನುಮಾನಗಳನ್ನು ಪರಿಹರಿಸಲು ಚುನಾವಣಾ ಆಯೋಗ ‘ಹ್ಯಾಕ್‌ ಸಕಾಲು’ ಹಾಕಿರುವ ಬೆನ್ನಲ್ಲೇ ಮಹಾರಾಷ್ಟ್ರದ ವಿಧಾನಸಭೆ ಕ್ಷೇತ್ರವೊಂದರ ಮತಯಂತ್ರಗಳ ವಿಧಿವಿಜ್ಞಾನ ಪರೀಕ್ಷೆಗೆ ಮುಂಬೈ ಹೈಕೋರ್ಟ್‌ ಆದೇಶಿಸಿದೆ. 2014ರಲ್ಲಿ ನಡೆದಿದ್ದ ಸಾರ್ವತ್ರಿಕ ಚುನಾವಣೆ ವೇಳೆ ಪರ್ವತಿ ಕ್ಷೇತ್ರದಿಂದ ಸ್ಪರ್ಧಿಸಿ ಕೇವಲ 52 ಮತಗಳ ಅಂತರದಿಂದ ಸೋಲುಂಡಿದ್ದ ಕಾಂಗ್ರೆಸ್‌ ಅಭ್ಯರ್ಥಿ ಚಾಜೆದ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಚುನಾವಣೆ ವೇಳೆ ಮತದಾನ ಕೇಂದ್ರ ಅಥವಾ ಎಣಿಕೆ ಕೇಂದ್ರಗಳಲ್ಲಿ ಮತಯಂತ್ರಗಳನ್ನು ತಿರುಚಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದೆ. ಜತೆಗೆ 9 ಪ್ರಶ್ನೆಗಳನ್ನೂ ಕೇಳಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next