ಕೊಳವೆ ಬಾವಿಗಳನ್ನು ವಶಕ್ಕೆ ಪಡೆಯಲು ಅವಕಾಶವಿದ್ದು ಆ ಕೊಳವೆ ಬಾವಿಗಳ ಮಾಲೀಕರಿಗೆ ಸರ್ಕಾರದಿಂದಲೇ ಹಣ ಪಾವತಿಸಲಾಗುವುದು ಎಂದು
ಹೇಳಿದರು.
Advertisement
ಬರಗಾಲ ಪೀಡಿತ ತಾಲೂಕುಗಳಲ್ಲಿ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಜಿಲ್ಲಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಕೊರತೆಯಾಗಬಾರದು ಎಂದು ತಾಕೀತು ಮಾಡಿದರು. ಸದ್ಯಕ್ಕೆ ರಾಜ್ಯದ 13 ಜಿಲ್ಲೆಗಳ 352 ಹಳ್ಳಿಗಳಿಗೆ ಟ್ಯಾಂಕರ್ ಮತ್ತು ಖಾಸಗಿ ಕೊಳವೆ ಬಾವಿಗಳ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿದೆ . ಬರಪೀಡಿತ ಎಂದು ಘೋಷಿಸಿರುವ 86 ತಾಲೂಕುಗಳಿಗೂ ಕುಡಿಯುವ ನೀರಿನ ಅಗತ್ಯತೆ ಪೂರೈಸಲು ತಲಾ 50 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಜಾನುವಾರುಗಳಿಗೆ
ಮೇವಿಗಾಗಿ ಪಸು ಸಂಗೋಪನಾ ಇಲಾಖೆಗೆ 15 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.