Advertisement
ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಅವರು ಮಾತನಾಡಿ, ಬೀಚ್ನ ಶುಚಿತ್ವಕ್ಕೆ ಸಂಬಂಧಿಸಿ ಮಹಾನಗರ ಪಾಲಿಕೆಯಿಂದ ವ್ಯವಸ್ಥೆ ಮಾಡಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಸ್ಥಳೀಯ ಮೀನುಗಾರರ ಜೀವರಕ್ಷಕ ತಂಡ, ಕರಾವಳಿ ಪೊಲೀಸ್ ತಂಡ ರಚಿಸಲಾಗಿದೆ. ಅಗತ್ಯ ಲೈಟಿಂಗ್ ವ್ಯವಸ್ಥೆ ಜತೆ ಬ್ಯಾರಿಕೇಡ್ಗಳನ್ನು ಅಳವಡಿಸಲಾಗುವುದು. ಬೀಚ್ನಲ್ಲಿ ಸಮುದ್ರದ ಬಳಿ ಜಲ ಸಾಹಸ ಕ್ರೀಡೆಗಳಿಗೆ ಸಂಜೆ 6.30ರ ವರೆಗೆ ಅವಕಾಶ ಕಲ್ಪಿಸಲಾಗಿದ್ದು ಬೀಚ್ ಉತ್ಸವ ರಾತ್ರಿ 9.30ರ ವರೆಗೆ ಇರಲಿದೆ ಎಂದರು.
Related Articles
ಜ.11ರಂದು ಸಂಜೆ ಉತ್ಸವಕ್ಕೆ ಚಾಲನೆ ದೊರೆಯಲಿದ್ದು, 6 ಗಂಟೆಗೆ ನೃತ್ಯ ಉತ್ಸವ ಆಯೋಜಿಸಲಾಗಿದೆ. ಬಳಿಕ ಕದ್ರಿ ಮಣಿಕಾಂತ್ ಕದ್ರಿ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಜ.12ರಂದು ಬೆಳಗ್ಗೆ 5.30ಕ್ಕೆ ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನದಿಂದ ಕಾರ್ಯಕ್ರಮ, 6.30ಕ್ಕೆ ಉದಯರಾಗ, 9ರಿಂದ ಜಲಕ್ರೀಡೆ ನಡೆಯಲಿದೆ. 9.30ಕ್ಕೆ ಮರಳು ಶಿಲ್ಪ ಸ್ಪರ್ಧೆ ನಡೆಯಲಿದೆ. ಸಂಜೆ 5.30ಕ್ಕೆ ನೃತ್ಯೋತ್ಸವ, 6.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಬಳಿಕ ರಘು ದೀಕ್ಷಿತ್ರವರಿಂದ ಲೈವ್ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಅವರು ವಿವರಿಸಿದರು.
Advertisement
ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ|ಅರುಣ್ ಕುಮಾರ್, ಮುಡಾ ಆಯುಕ್ತೆ ನೂರ್ ಜಹರಾ ಖಾನಂ, ಪಣಂಬೂರು ಬೀಚ್ ಅಭಿವೃದ್ಧಿ ಸಮಿತಿಯ ಯತೀಶ್ ಬೈಕಂಪಾಡಿ ಉಪಸ್ಥಿತರಿದ್ದರು.