Advertisement
“ಉದಯವಾಣಿ’ ಬೆಂಗಳೂರು ಆವೃತ್ತಿ ಕಚೇರಿಯಲ್ಲಿ ಆಯೋಜಿಸಿದ್ದ ಸಂವಾದದಲ್ಲಿ ಪಾಲ್ಗೊಂಡಿದ್ದ ಅವರು, ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆ ಜಾರಿಯಲ್ಲಿರುವ ಗ್ರಾಮಗಳಲ್ಲಿ “ಮನೆ ಮನೆಗೆ ಗಂಗೆ’ ಅನುಷ್ಠಾನ ಸುಲಭವಾಗಲಿದೆ. ಬಹುಗ್ರಾಮ ಕುಡಿಯುವ ನೀರು ಯೋಜನೆ ಜಾರಿಯಾಗದ ಗ್ರಾಮಗಳಲ್ಲಿ ಆದಷ್ಟು ಬೇಗ ಇದನ್ನು ಜಾರಿ ಗೊಳಿಸಲಾಗುವುದು ಎಂದರು.
ಶುದ್ಧ ಕುಡಿಯುವ ನೀರಿನ ಘಟಕಗಳ ಅನುಷ್ಠಾನದಲ್ಲಿ ಅವ್ಯವಹಾರ ಆರೋಪ ಹಾಗೂ ನಿರ್ವಹಣೆ ಸರಿಯಾಗಿ ಆಗದೆ ಘಟಕಗಳು ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ ರಾಜ್ಯ ಸರಕಾರದಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸುವುದಿಲ್ಲ. ಬದಲಿಗೆ ಖಾಸಗಿ ಏಜೆನ್ಸಿಗೆ ವಹಿಸಲಾಗುವುದು. ಈಗಿರುವ ಘಟಕಗಳ ನಿರ್ವಹಣೆಗೂ ಹೊಸ ವ್ಯವಸ್ಥೆ ರೂಪಿಸಲಾಗುವುದು ಎಂದು ಹೇಳಿದರು. ಕಲುಷಿತ ನೀರು ಪೂರೈಕೆಯಾಗುತ್ತಿರುವ ಕಡೆ ಮಾತ್ರ ಶುದ್ಧ ಕುಡಿ ಯುವ ನೀರಿನ ಘಟಕ ಸ್ಥಾಪನೆ ಮಾಡ ಬೇಕು, ಎಲ್ಲ ಕಡೆ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಬಾರದು ಎಂದು ಸುಪ್ರೀಂ ಕೋರ್ಟ್ ಸಹ ಹೇಳಿದೆ.