Advertisement

20 ಕೋಟಿ ಸದಸ್ಯರ ಗುರಿ

01:36 AM Jul 28, 2019 | mahesh |

ರೊಹಟಕ್: ಬಿಜೆಪಿ ಸದ್ಯ 11 ಕೋಟಿ ಸದಸ್ಯರನ್ನು ಹೊಂದಿದ್ದು, ಅದನ್ನು 20 ಕೋಟಿಗೆ ಏರಿಸುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಪಕ್ಷದ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಹರ್ಯಾಣದ ರೋಹrಕ್‌ನಲ್ಲಿ ಮಾತನಾಡಿದ ಅವರು, ಸದ್ಯ ಬಿಜೆಪಿ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಗಿದೆ. ನಾವು ಇತರ ರಾಜಕೀಯ ಪಕ್ಷಗಳ ಜತೆಗೆ ಸ್ಪರ್ಧೆ ಮಾಡುತ್ತಿಲ್ಲ. ನಾವು ನಿರ್ಮಿಸಿದ ದಾಖಲೆ ಮುರಿಯಲು ನಾವೇ ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರ 50 ದಿನಗಳಲ್ಲಿ ಸಾಧಿಸಲಾಗಿರುವ ಪ್ರಗತಿ ಮೈಲುಗಲ್ಲಾಗಲಿದೆ ಮತ್ತು 5 ಲಕ್ಷಕೋಟಿ ಡಾಲರ್‌ ಅರ್ಥ ವ್ಯವಸ್ಥೆ ಹೊಂದುವ ನಿಟ್ಟಿನಲ್ಲಿ ಮೆಟ್ಟಿಲಾಗಿ ಪರಿವರ್ತನೆಯಾಗಲಿದೆ ಎಂದು ಹೇಳಿದ್ದಾರೆ. ಹರ್ಯಾಣದಲ್ಲಿ ಅಕ್ಟೋಬರ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next