Advertisement

ಬಡವರಿಗೆ ಆಹಾರ ಧಾನ್ಯ ಪೂರೈಸಿ: ಶೋಭಾ

01:21 PM Apr 19, 2020 | Naveen |

ತರೀಕೆರೆ: ಕ್ಷೇತ್ರದಲ್ಲಿ ಯಾವುದೇ ವ್ಯಕ್ತಿ ಹಸಿವಿನಿಂದ ಬಳಲಬಾರದು. ಗ್ರಾಮೀಣ ಭಾಗದಲ್ಲಿರುವ ಬಡಜನರು, ನಿರಾಶ್ರಿತರಿಗೆ ಆಹಾರ ಧಾನ್ಯ ಪೂರೈಕೆಯಾಗಬೇಕು. ಪಡಿತರ ತಲುಪದವರಿಗೆ ಸಂಸದರ ಮತ್ತು ಶಾಸಕರು ವಿತರಣೆ ಮಾಡುತ್ತಿರುವ ಕಿಟ್‌ಗಳನ್ನು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

Advertisement

ಎಪಿಎಂಸಿ ಸಭಾಂಗಣದಲ್ಲಿ ಹಮಾಲಿ ಕಾರ್ಮಿಕರಿಗೆ ಆಹಾರ ಧಾನ್ಯದ ಕಿಟ್‌ ವಿತರಣೆ ಮಾಡಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಟಾಸ್ಕ್ಫೋರ್ಸ್‌ ಸಭೆಯಲ್ಲಿ ಮಾತನಾಡಿದರು. ದಿನಸಿ ಸಾಮಗ್ರಿಗಳ ಬೆಲೆ ದಿನೇ ದಿನೆ ಏರಿಕೆಯಾಗುತ್ತಿರುವ ಮತ್ತು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಎಪಿಎಂಸಿ ಆವರಣದಲ್ಲಿರುವ ಹೋಲ್‌ಸೇಲ್‌ ಅಂಗಡಿಗಳಲ್ಲಿ ಮತ್ತು ಚಿಲ್ಲರೆ ಮಾರಾಟ ಮಾಡುವ ಅಂಗಡಿಗಳಲ್ಲಿ ದಿನಸಿ ಸಾಮಗ್ರಿಗಳ ದರ ಪಟ್ಟಿಯನ್ನು ಕಡ್ಡಾಯವಾಗಿ ಹಾಕಬೇಕು. ದಿನಸಿಯನ್ನು ಹೆಚ್ಚು ದರದಲ್ಲಿ ಮಾರಾಟ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲೂಕು ವೈದ್ಯಾಧಿಕಾರಿ ಡಾ| ಚಂದ್ರಶೇಖರ್‌ ಮಾತನಾಡಿ, ಹೊರದೇಶದಿಂದ ಬಂದ 36 ಮಂದಿಯನ್ನು ಹೋಮ್‌ ಕ್ವಾರಂಟೈನ್‌ ಮಾಡಲಾಗಿದೆ. 35 ಜನರನ್ನು ತಪಾಸಣೆಗೆ ಒಳಪಡಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. 262 ನಿರ್ಗತಿಕರು, ನಿರಾಶ್ರಿತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಶಾಸಕ ಡಿ.ಎಸ್‌.ಸುರೇಶ್‌, ತಾಪಂ ಅಧ್ಯಕ್ಷೆ ಪದ್ಮಾವತಿ, ಎಪಿಎಂಸಿ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷ ನಾಗರಾಜ್‌, ಉಪವಿಭಾಗಾಧಿಕಾರಿ ರೇಣುಕಾ ಪ್ರಸಾದ್‌, ಡಿವೈಎಸ್‌ಪಿ ರೇಣುಕಾ ಪ್ರಸಾದ್‌, ತಹಶೀಲ್ದಾರ್‌ ಸಿ.ಜಿ.ಗೀತಾ, ಎಪಿಎಂಸಿ ಸದಸ್ಯರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next