Advertisement
ಶ್ರೀ ಸಿದ್ದರಾಮೇಶ್ವರ ಜಯಂತಿಯ ಪೋಸ್ಟರ್ ಮತ್ತು ಫ್ಲೆಕ್ಸ್‌ಗಳನ್ನು ಅನಾವರಣಗೊಳಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,12ನೇ ಶತಮಾನದ ಕಾಯಕ ಯೋಗಿ ಶ್ರೀ ಸಿದ್ದರಾಮೇಶ್ವರರು ನೆಲೆಸಿದ್ದ ಕ್ಷೇತ್ರದಲ್ಲಿ ಅವರ ಜಯಂತಿ ಉತ್ಸವ ನಡೆಯುತ್ತಿರುವುದು ಜಿಲ್ಲೆಯಲ್ಲಿಯೇ ವಿಶೇಷ ಕಾರ್ಯಕ್ರಮವಾಗಲಿದೆ ಎಂದರು.
Related Articles
Advertisement
ಕಾರ್ಯಕ್ರಮದಲ್ಲಿ 3 ಲಕ್ಷ ಜನರು ಕುಳಿತುಕೊಳ್ಳಲು ಆಸನ ವ್ಯವಸ್ಥೆ ಮಾಡಲಾಗಿದೆ. ಇದರ ಪೂರ್ಣ ಜವಾಬ್ದಾರಿಯನ್ನು ಶಾಸಕ ಡಿ.ಎಸ್.ಸುರೇಶ್ ಹೊತ್ತುಕೊಂಡಿದ್ದಾರೆ. ಭಕ್ತಾದಿಗಳಿಗೆ ಊಟದ ವ್ಯವಸ್ಥೆಯನ್ನು ಶಾಸಕ ಬೆಳ್ಳಿಪ್ರಕಾಶ್ ನಿರ್ವಹಿಸುತ್ತಾರೆ. ಕಾರ್ಯಕ್ರಮದ ಉಸ್ತುವಾರಿಯನ್ನು ಸ್ವಾಗತ ಸಮಿತಿ ಅಧ್ಯಕ್ಷ ಬಿ.ರಾಜಪ್ಪ ನೋಡಿಕೊಳ್ಳಲಿದ್ದಾರೆ ಎಂದರು.
ಕನ್ನಡ- ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ 1 ಕೋಟಿ ರೂ. ವೆಚ್ಚದ ಯಾತ್ರಿ ನಿವಾಸ್ ನಿರ್ಮಾಣಕ್ಕೆ ಅನುಮೋದನೆ ನೀಡಿದ್ದು, ಜನವರಿ 14ರಂದು ಕಟ್ಟಡ ಕಾಮಗಾರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಶಂಕುಸ್ಥಾಪನೆ ಮಾಡಲಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಸರಕಾರ 50 ಲಕ್ಷ ರೂ. ನೀಡಿದ್ದು, ಅಭಿವೃದ್ಧಿಕಾರ್ಯಗಳು ನಡೆಯುತ್ತಿದೆ. ಸಿದ್ದರಾಮರಿಂದ ನಿರ್ಮಾಣಗೊಂಡಿದ್ದ ಕಲ್ಯಾಣಿಗೆ ಹೊಸ ರೂಪ ನೀಡಲಾಗುತ್ತಿದೆ ಎಂದರು. ಜಯಂತ್ಯುತ್ಸವ ಸಮಿತಿಯನ್ನು ಜಾತ್ಯತೀತವಾಗಿ ಮಾಡಲಾಗಿದೆ. ಎಲ್ಲಾ ವರ್ಗದ ಮುಖಂಡರು ಸಮಿತಿಯಲ್ಲಿದ್ದು, ಅವರಿಗೆ ವಿಶೇಷ ಹೊಣೆಗಾರಿಕೆ ನೀಡಲಾಗಿದೆ. ಸಮಾವೇಶದಲ್ಲಿ ರೈತ, ಮಹಿಳೆಯರ ಮತ್ತು ಯುವಜನರ ಸಮಸ್ಯೆಗಳ ಬಗ್ಗೆ ವಿಚಾರ ಸಂಕಿರಣಗಳು ನಡೆಯಲಿವೆ. ಎಲ್ಲಾ ವರ್ಗದ ಮಠಾಧೀಶರು ಭಾಗವಹಿಸಲಿದ್ದಾರೆ. ಯಳನಾಡು ಮಠದ ಶ್ರೀ ಜ್ಞಾನಪ್ರಭು ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಎಚ್.ಚಂದ್ರಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕ ಟಿ.ಎಲ್.ರಮೇಶ್, ಪುರಸಭಾ ಮಾಜಿ ಸದಸ್ಯ ಈರಣ್ಣ, ಸಮಿತಿ ಸದಸ್ಯ ಶಿವಣ್ಣ, ಲೋಹಿತ್ ಕೋಟಿ ಮತ್ತು ಹಾಲವಜ್ರಪ್ಪ ಇತರರಿದ್ದರು.