Advertisement
ಸಭೆಯಲ್ಲಿ ಮಾತನಾಡಿದ ಸದಸ್ಯ ಕೆಂಪೇಗೌಡ ಅವರು, ಸಿದ್ಧೇಶ್ವರ ಗ್ರಾಮದಲ್ಲಿ ರಸ್ತೆ ನಿರ್ಮಾಣಕ್ಕೆ 50 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ನಿರ್ವಹಿಸುವಂತೆ ಕಾರ್ಯಾದೇಶ ನೀಡಿ ಮೂರು ವರ್ಷ ಕಳೆದಿದೆ. ಆದರೂ ಕಾಮಗಾರಿಗಳು ಪೂರ್ಣಗೊಂಡಿಲ್ಲ. ಗುತ್ತಿಗೆದಾರ ಬಾಲು ಮೂರು ಕಾಮಗಾರಿಗಳನ್ನು ನಿರ್ವಹಿಸಿ ಇನ್ನುಳಿದ ಎರಡು ಕಾಮಗಾರಿಗಳನ್ನು ಮಾಡದೇ ಇರುವುದರಿಂದ ಗ್ರಾಮಸ್ಥರು ರಸ್ತೆಯಲ್ಲಿ ಸಂಚರಿಸಲು ತೀರಾ ತೊಂದರೆಯಾಗಿದೆ ಎಂದು ಹದಗೆಟ್ಟ ರಸ್ತೆ ಫೋಟೋ ಪ್ರದರ್ಶಿಸಿ ಗಮನ ಸೆಳೆದರು.
Related Articles
Advertisement
ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜ್ ಮಾತನಾಡಿ, ಹಿಂದಿನ ವರ್ಷದ ಎಸ್‌ಎಸ್‌ಎಲ್ಸಿ ಫಲಿತಾಂಶದಲ್ಲಿ ಕಡಿಮೆ ಯಾಗಿರುವುದನ್ನು ಗಮನಿಸಿ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ನೀಡಲಾಗಿದೆ. ಅಂಕ ಗಳಿಸುವಲ್ಲಿ ಹಿಂದುಳಿದ ಮಕ್ಕಳನ್ನು ವಿಶೇಷವಾಗಿ ಗಮನಿಸ ಲಾಗುತ್ತಿದೆ. ಜೊತೆಗೆ ಪ್ರತಿ ತಿಂಗಳಿಗೊಮ್ಮೆ ಶಿಕ್ಷಕರಿಗೆ ಸಂಪನ್ಮೂಲ ವ್ಯಕ್ತಿಗಳಿಂದ ಕಾರ್ಯಾಗಾರ ನಡೆಸಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಅಧ್ಯಕ್ಷೆ ಪದ್ಮಾವತಿ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳತ್ತ ಹೆಚ್ಚಿನ ಗಮನ ಹರಿಸಬೇಕು. ಪಾಠಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ಮಕ್ಕಳನ್ನು ಪರೀಕ್ಷೆಗೆ ಸರ್ವ ಸನ್ನದ್ಧಗೊಳಿಸಬೇಕು. ತಾಲೂಕಿನಲ್ಲಿ ಉತ್ತಮ ಫಲಿತಾಂಶ ತರುವತ್ತ ಎಲ್ಲರೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ತಾಲೂಕಿನಲ್ಲಿ ಯಾವುದೇ ಸಾಂಕ್ರಾಮಿಕ ರೋಗಗಳು ಇಲ್ಲ ಎಂದು ತಾಲೂಕು ವೈದ್ಯಾಕಾರಿ ಡಾ| ಚಂದ್ರಶೇಖರ್ ಸಭೆಗೆ ಮಾಹಿತಿ ನೀಡಿದರು. ಕಾಡಿನಂಚಿಲ್ಲಿರುವ ಗ್ರಾಮಗಳಲ್ಲಿ 17,000 ಜನರಿಗೆ ಕೆಎಫ್‌ಡಿ ಚುಚ್ಚುಮದ್ದು ನೀಡಲಾಗುತ್ತಿದೆ. ಇಲ್ಲಿಯ ತನಕ 3,460 ಜನರಿಗೆ ಚುಚ್ಚುಮದ್ದು ನೀಡಲಾಗಿದೆ. ಸತತವಾಗಿ ಮಳೆಯಾದ ಹಿನ್ನೆಲೆಯಲ್ಲಿ ಚುಚ್ಚುಮದ್ದು ನೀಡಲಾಗಿಲ್ಲ ಎಂದು ತಿಳಿಸಿದರು.
ಸಭೆಯಲ್ಲಿ ಉಪಾಧ್ಯಕ್ಷೆ ಮಂಜುಳಾ, ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್, ಇಒ ವಿಶಾಲಾಕ್ಷಮ್ಮ, ಅಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.