ಪ್ರತಿಷ್ಠಿತ ಚಲನಚಿತ್ರೋತ್ಸವಗಳಲೊಂದಾದ ರಾಜಸ್ಥಾನ್ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ನಲ್ಲಿ ತಾರಿಣಿ ಚಿತ್ರದ ಅಭಿನಯಕ್ಕೆ ಮಮತಾ ರಾಹುತ್ ರವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಬಂದಿದೆ.
ಸಿದ್ದು ಪೂರ್ಣಚಂದ್ರರವರು ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರ ಹಲವು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಆಯ್ಕೆಯಾಗಿ ಪ್ರದರ್ಶನಗೊಂಡು ಪ್ರಶಸ್ತಿಗಳಿಸುತ್ತಿದೆ. ಈ ಚಿತ್ರಕ್ಕೆ ಡಾ. ಸುರೇಶ್ ಕೋಟ್ಯಾನ್ ಚಿತ್ರಾಪು ರವರು ಬಂಡವಾಳ ಹೂಡಿ ಒಂದು ಮುಖ್ಯ ಪಾತ್ರದಲ್ಲೂ ಅಭಿನಯಿಸಿದ್ದಾರೆ.
ರಾಜಸ್ಥಾನ್ ಫೀಲ್ಮ್ ಫೆಸ್ಟಿವಲ್ ನಲ್ಲಿ ಮಮತಾ ರಾಹುತ್ ರವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಬಂದಿರುವುದು ಇಡೀ ತಂಡಕ್ಕೆ ಖುಷಿ ತಂದಿದೆ, ಗರ್ಭಿಣಿಯೊಬ್ಬಳ ಕಥೆಯಾದಾರಿತ ಈ ಸಿನಿಮಾಗೆ ಮಮತಾ ರಾಹುತ್ ಕೂಡ ನೈಜ ಗರ್ಭಿಣಿಯಾಗಿ ಮನೋಜ್ಞವಾಗಿ ಅಭಿನಯಿದ್ದಾರೆ ಎಂದು ನಿರ್ದೇಶಕರು ಸಂತಸ ವ್ಯಕ್ತಪಡಿಸಿದರು.
ಅವರಿಗೆ ಕೆಲವೊಂದು ಸಂದರ್ಭಗಳಲ್ಲಿ ಕಷ್ಟ ಎನಿಸಿದರೂ ಅದನ್ನು ಯಾರ ಬಳಿಯೂ ಹೇಳಿಕೊಳ್ಳದೆ ಚಿತ್ರೀಕರಣ ಮಾಡಲು ಸಂಪೂರ್ಣ ಸಹಕಾರ ನೀಡಿ, ದೃಶ್ಯ ಕಟ್ಟುವಲ್ಲಿ ಧೈರ್ಯ ತೋರಿದರು. ಅವರು ಗರ್ಭಿಣಿಯಾದ 7ನೇ ತಿಂಗಳಿಂದ ಚಿತ್ರೀಕರಣ ಪ್ರಾರಂಭಿಸಿ ಒಂಬತ್ತನೇ ತಿಂಗಳು ತುಂಬಿದಾಗಲೂ ಚಿತ್ರೀಕರಣ ಮಾಡುತ್ತಲೇ ಇದ್ದೆವು ಎನ್ನುವುದು ಚಿತ್ರತಂಡದ ಮಾತು.
ನಾಯಕನಾಗಿ ರೋಹಿತ್ ನಟಿಸಿದ್ದಾರೆ. ಮುಖ್ಯಪಾತ್ರದಲ್ಲಿ ಭವಾನಿ ಪ್ರಕಾಶ್, ಸುಧಾ ಪ್ರಸನ್ನ, ವಿಜಯಲಕ್ಷ್ಮೀ , ಪ್ರಮಿಳಾ ಸುಬ್ರಹ್ಮಣ್ಯ, ಸನ್ನಿ, ಶೀಬಾ, ದೀಪಿಕಾ ಗೌಡ, ಕವಿತ ಕಂಬಾರ್ ಮುಂತಾ ದವರು ಅಭಿನಯಿಸಿದ್ದಾರೆ.