Advertisement

ತರುಣ್ ತೇಜ್‍ಪಾಲ್ ಲೈಂಗಿಕ ದೌರ್ಜನ್ಯ ಕೇಸ್: ವಿಚಾರಣೆ ಏಪ್ರಿಲ್ 11 ಕ್ಕೆ ಮುಂದೂಡಿಕೆ

05:58 PM Mar 31, 2022 | Team Udayavani |

ಪಣಜಿ: ಸಹುದ್ಯೋಗಿ ಪತ್ರಕರ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಹಲ್ಕಾ ಪತ್ರಿಕೆಯ ಮಾಜಿ ಸಂಪಾದಕ ತರುಣ್ ತೇಜ್‍ಪಾಲ್ ರನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ನ ಗೋವಾ ಪೀಠ ಏಪ್ರಿಲ್ 11 ಕ್ಕೆ ಮುಂದೂಡಿದೆ.

Advertisement

ಇದೇ ಪ್ರಕರಣಕ್ಕೆ ಸಂಬಂಧಿಸಿದ ತೇಜ್‍ಪಾಲ್ ರವರ ಅರ್ಜಿಯ ವಿಚಾರಣೆ ಏಪ್ರಿಲ್ 1 ರಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ. ಇನ್ ಕ್ಯಾಮರಾ ವಿಚಾರಣೆಗಾಗಿ ಅವರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದ ನಂತರ ತೇಜ್‍ಪಾಲ್ ರವರು ಸುಪ್ರಿಂ ಕೋರ್ಟ್ ನ ಮೆಟ್ಟಿಲೇರಿದ್ದರು.

ಏಪ್ರಿಲ್ 1 ರಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರಿಂ ಕೋರ್ಟ್ ನಲ್ಲಿ ವಿಚಾರಣೆ ಆರಂಭಗೊಳ್ಳಲಿದೆ. ಇದರಿಂದಾಗಿ ಹೈಕೋರ್ಟ್ ನಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ಮುಂದೂಡಬೇಕು ಎಂದು ತರುಣ್ ತೇಜ್‍ಪಾಲ್ ಪರ ವಕೀಲರು ಬಾಂಬೆ ಹೈಕೋರ್ಟ್ ಗೋವಾ ಪೀಠದಲ್ಲಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಬಾಂಬೆ ಹೈಕೋರ್ಟ್ ನ ಗೋವಾ ಪೀಠವು ಈ ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 11 ಕ್ಕೆ ಮುಂದೂಡಿದೆ.

ಸಂತ್ರಸ್ತೆ ಯ ದೂರಿನ ಪ್ರಕಾರ ತೇಜ್‍ಪಾಲ್ ರವರು ಗೋವಾದ ಪಂಚತಾರಾ ಹೋಟೆಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮ್ಮ ಕಚೇರಿಯ ಮಹಿಳಾ ಪತ್ರಕರ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ ಸಾಕ್ಷಾಧಾರಗಳ ಕೊರತೆಯಿಂದ ಮಾಪ್ಸಾ ಜಿಲ್ಲಾ ಸತ್ರ ನ್ಯಾಯಾಲಯವು ತೇಜ್‍ಪಾಲ್ ರವರನ್ನು ಖುಲಾಸೆಗೊಳಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಗೋವಾ ಸರ್ಕಾರ ಬಾಂಬೆ ಹೈಕೋರ್ಟ್ ಗೋವಾ ಪೀಠದ ಮೆಟ್ಟಿಲೇರಿತ್ತು.

Advertisement

Udayavani is now on Telegram. Click here to join our channel and stay updated with the latest news.

Next