ಚಿಕ್ಕಬಳ್ಳಾಪುರ: ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ 5 ಸ್ಥಳಗಳಲ್ಲಿ ರಾಗಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, ಡಿ.15ರಿಂದ ರಾಗಿ ಖರೀದಿ ಮಾಡಲಾಗುತ್ತದೆ. ಶುಕ್ರವಾರದಿಂದಲೇನೋಂದಣಿ ಆರಂಭವಾಗಿದ್ದು, ಜಿಲ್ಲೆಯ ರೈತರು ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ 2020-21ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಕೇಂದ್ರಗಳನ್ನು ತೆರೆಯುವ ಸಂಬಂಧ 2ನೇ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಲ್ಲೆಲ್ಲಿ ಆರಂಭ?: ಜಿಲ್ಲೆಯಲ್ಲಿ ಗೌರಿಬಿದನೂರು ನಗರದ ಎಪಿಎಂಸಿಮಾರುಕಟ್ಟೆ ಆವರಣ, ಚಿಂತಾಮಣಿ ತಾಲೂಕಿನ ಕಾಗತಿ ರಸ್ತೆಯಲ್ಲಿರುವ ಕೆಎಫ್ ಸಿಎಸ್ ಗೋದಾಮು, ಚಿಕ್ಕಬಳ್ಳಾಪುರ ತಾಲೂಕಿನ ವರದಹಳ್ಳಿ ಬಳಿಯಿರುವ ಕೆಎಫ್ ಸಿಎಸ್ ಗೋದಾಮು, ಬಾಗೇಪಲ್ಲಿ ಪಟ್ಟಣದಲ್ಲಿರುವ ಎಪಿಎಂಸಿ ಮಾರುಕಟ್ಟೆ ಆವರಣಯಲ್ಲಿ ರಾಗಿ ಖರೀದಿ ಕೇಂದ್ರಗಳನ್ನುಸ್ಥಾಪಿಸಲಾಗಿದೆ. ರೈತರು ತಮ್ಮ ತಮ್ಮ ವ್ಯಾಪ್ತಿಯ ಖರೀದಿ ಕೇಂದ್ರಗಳಲ್ಲಿ ಹೆಸರು ನೋಂದಣಿಮಾಡಿಕೊಳ್ಳಬಹುದು ಎಂದು ಹೇಳಿದರು.
ಗ್ರೇಡರ್‌ಗಳ ನೇಮಕ: ರಾಗಿ ಖರೀದಿ ಸಂಬಂಧ ಎಲ್ಲಾ ಖರೀದಿ ಕೇಂದ್ರಗಳಲ್ಲಿ ಶುಕ್ರವಾರದಿಂದಲೇ ನೋಂದಣಿ ಪ್ರಾರಂಭಗೊಂಡಿದ್ದು, 2021ರ ಜನವರಿ 31ರವರೆಗೆ ನೋಂದಣಿಗೆ ಅವಕಾಶವಿದೆ. ಈಸಂಬಂಧ ಜಿಲ್ಲೆಯಲ್ಲಿ ಈಗಾಗಲೇ ಗ್ರೇಡರ್ ಗಳನ್ನು ನೇಮಕ ಮಾಡಲಾಗಿದ್ದು, ಇವರಿಗೆ ತರಬೇತಿಯೂ ನೀಡಲಾಗಿದೆ. ನೋಂದಣಿ ರೈತರಿಂದ 2021ರ ಮಾರ್ಚ್ 15 ರವರೆಗೆರಾಗಿ ಖರೀದಿಸಲಾಗುತ್ತದೆ ಎಂದು ತಿಳಿಸಿದರು.
ಪ್ರಚಾರ ಮಾಡಿ: ಜಿಲ್ಲೆಯಲ್ಲಿ ತೆರೆದಿರುವ ರಾಗಿ ಖರೀದಿ ಕೇಂದ್ರಗಳ ಬಗ್ಗೆ ಕೃಷಿ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಪ್ರಚಾರ ಮಾಡಬೇಕು. ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರಗಳು,ಗ್ರಾಮ ಪಂಚಾಯಿತಿಗಳು, ಎಪಿಎಂಸಿಮಾರುಕಟ್ಟೆಗಳು ಸೇರಿದಂತೆ ಎಲ್ಲಾಗ್ರಾಮಗಳಲ್ಲಿ ಬೆಂಬಲ ಬೆಲೆಯ ಬಗೆಗಿನಭಿತ್ತಿಪತ್ರಗಳನ್ನು ಪ್ರಚುರ ಪಡಿಸಬೇಕು.ಹೆಚ್ಚಿನರೈತರುಇದರಲಾಭಪಡೆಯುವಂತೆ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳು, ಕೃಷಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕಿ ಸವಿತಾ, ಜಂಟಿ ಕೃಷಿ ನಿರ್ದೇಶಕಿ ಎಲ್. ರೂಪಾ, ಕೆಎಸ್‌ಎಫ್‌ಸಿ ವ್ಯವಸ್ಥಾಪಕರಾದ ವಿಜಯ್‌ಕುಮಾರ್ ಹಾಗೂ ಇತರೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರತಿ ಕ್ವಿಂಟಲ್‌ಗೆ 3,295 ರೂ.ಬೆಂಬಲ ಬೆಲೆ :
ಖರೀದಿ ಕೇಂದ್ರಗಳಲ್ಲಿ ಡಿ.15 ರಿಂದ ರಾಗಿ ಖರೀದಿ ಪ್ರಕ್ರಿಯೆ ಆರಂಭವಾಗಲಿದ್ದು, ರೈತರು ಆಧಾರ್‌ಕಾರ್ಡ್ ಅಥವಾ ಫ್ರೂಟ್ ಐಡಿಯನ್ನು ತಂದು ನೋಂದಣಿಮಾಡಿಸಿಕೊಳ್ಳಬಹುದು. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಸರ್ಕಾರ ಪ್ರತಿ 1 ಕ್ವಿಂಟಲ್‌ಗೆ 3,295 ರೂ. ಬೆಂಬಲ ಬೆಲೆ ನಿಗದಿ ಮಾಡಿದ್ದು, 1 ಎಕರೆಗೆ 10 ಕ್ವಿಂಟಲ್‌ನಂತೆ ಒಬ್ಬ ರೈತರಿಂದ ಗರಿಷ್ಠ 50 ಕ್ವಿಂಟಲ್ ವರೆಗೂ ರಾಗಿ ಖರೀದಿ ಮಾಡಲಾಗುತ್ತದೆ. ಖರೀದಿ ಕೇಂದ್ರಗಳಲ್ಲಿ ರಾಗಿ ಖರೀದಿಗೆ ಎಲ್ಲಾ ರೀತಿಯ ಸಿದ್ಧತೆಯನ್ನು ಸಂಬಂಧಪಟ್ಟ ಅಧಿಕಾರಿಗಳು ಕೈಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.