ಚಾಮರಾಜನಗರ: ಬೇಸಿಗೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶವೇ ಆಗಿರಲಿ ಅಥವಾ ನಗರ ಪಟ್ಟಣ ಪ್ರದೇಶಗಳೇ ಇರಲಿ ಎಲ್ಲಿಯೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಧಿಕಾರಿಗಳು ನೋಡಿ ಕೊಳ್ಳಬೇಕೆಂದು ಜಿಲ್ಲಾ ಉಸ್ತು ವಾರಿ ಸಚಿವ ಎಸ್. ಸುರೇಶ್‌ಕುಮಾರ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ, ಕುಡಿಯುವ ನೀರು ಪೂರೈ ಕೆಗೆ ಸಂಬಂಧಿಸಿದಂತೆ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದರು.
ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಅವಶ್ಯಕತೆ ಇರುವ ಕಾಮಗಾರಿಗಳಸಂಬಂಧ ತಯಾರಿಸಿರುವ ಕ್ರಿಯಾಯೋಜನಾ ಪಟ್ಟಿ ಪರಿಶೀಲಿಸಿದ ವೇಳೆಸಭೆಯಲ್ಲಿ ಹಾಜರಿದ್ದ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಆರ್. ನರೇಂದ್ರ, ಎನ್.ಮಹೇಶ್, ಸಿ.ಎಸ್. ನಿರಂಜನಕುಮಾರ್‌ಮಾತನಾಡಿ, ಸಮಸ್ಯಾತ್ಮಕ ಗ್ರಾಮಗಳಲ್ಲಿನೀರಿನ ಬವಣೆ ನೀಗಿಸಲು ಹೆಚ್ಚಿನಅನುದಾನ ಅಗತ್ಯವಿದೆ. ಈ ಬಗ್ಗೆ ಕ್ರಮ ವಹಿಸಬೇಕಿದೆ ಎಂದರು.
ಇದಕ್ಕೆ ಸ್ಪಂದಿಸಿದ ಸಚಿವರು, ಕುಡಿಯುವ ನೀರಿನ ಸಂಬಂಧ ಎಷ್ಟು ಗ್ರಾಮ ಗಳಿಗೆ ನೀರು ಒದಗಿಸಬೇಕಾಗುತ್ತದೆ ಹಾಗೂ ಇದಕ್ಕೆ ಬೇಕಾಗುವ ಅನುದಾ ನದ ವಿವರವನ್ನು ಒಳಗೊಂಡ ಪ್ರಸ್ತಾವನೆಯನ್ನು ಕೂಡಲೇ ಸಲ್ಲಿಸಬೇಕು. ಗ್ರಾಮೀಣಾಭಿವೃದ್ಧಿ ಸಚಿವರ ಜೊತೆಚರ್ಚಿಸಿ ಅಗತ್ಯ ಕ್ರಮ ವಹಿಸಲಾಗುವುದು ಎಂದರು.
ಇದೇ ವೇಳೆ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಮಾತನಾಡಿ, ಸಮಸ್ಯಾತ್ಮಕಗ್ರಾಮಗಳಿಗೆ ಬೇಸಿಗೆ ಸಮಯದಲ್ಲಿಶುದ್ಧ ಕುಡಿಯುವ ನೀರನ್ನು ಟ್ಯಾಂಕರ್‌ಮೂಲಕ ಪೂರೈಸಲು ಮತ್ತು ಅವಶ್ಯವಿದ್ದಲ್ಲಿ ಖಾಸಗಿ ಕೊಳವೆ ಬಾವಿಗಳಿಂದನೀರು ಪಡೆಯಲು ಬಾಡಿಗೆ ಪಾವತಿಗಾಗಿ ವಿನಿಯೋಗಿಸಲು ಹಣ ಬಿಡುಗಡೆಯಾಗಿದೆ ಎಂದರು.
ಜಿಪಂ ಉಪಾಧ್ಯಕ್ಷೆ ಶಶಿಕಲಾ, ಸದಸ್ಯ ಆರ್. ಬಾಲರಾಜು, ಸಿಇಒ ಹರ್ಷಲ್ ಬೋಯರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಎಸಿ ಡಾ. ಗಿರೀಶ್ ದಿಲೀಪ್ ಬಡೋಲೆ, ಎಎಸ್‌ಪಿ ಅನಿತಾ ಹದ್ದಣ್ಣನವರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಕೆ. ಸುರೇಶ್, ಜಂಟಿ ಕೃಷಿ ನಿರ್ದೇಶಕ ಚಂದ್ರಕಲಾ, ಪಶು ಸಂಗೋ ಪನಾ ಇಲಾಖೆಯ ಉಪನಿರ್ದೇಶಕ ವೀರ ಭದ್ರಯ್ಯ, ತಹಶೀಲ್ದಾರರಾದ ಕೆ. ಕುನಾಲ್, ಚಿದಾನಂದ ಗುರುಸ್ವಾಮಿ, ನಾಗರಾಜು, ರವಿಶಂಕರ್ ಇತರರಿದ್ದರು.