Advertisement
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಹತ್ಯೆ, ಗೋವು ಕಳ್ಳಸಾಗಾಟ ನಿಯಂತ್ರಿಸುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸರಕಾರೇತರ ಸಂಸ್ಥೆಗಳನ್ನೊಳಗೊಂಡ ಸಮಿತಿ ರಚಿಸಲಾಗಿದ್ದು, ಈ ನಿಟ್ಟಿನಲ್ಲಿ ಸಲಹೆ ಸೂಚನೆಗಳನ್ನು ಪಡೆಯಲಾಗುತ್ತಿದೆ. ಗೋ ಹತ್ಯೆ ಜತೆಗೆ ಜಾನುವಾರು ಕಳ್ಳಸಾಗಾಟ ಮಾಡುವವರ ವಿರುದ್ಧವೂ ಕಠಿನ ಕ್ರಮ ಕೈಗೊಳ್ಳಲಾಗುತ್ತದೆ. ಈ ನಿಟ್ಟಿನಲ್ಲಿ ಪ್ರತ್ಯೇಕ ಕಾರ್ಯಪಡೆ ರಚಿಸುವ ಚಿಂತನೆಯಿದೆ ಎಂದರು.
ಕೊಡಗು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಆದರೆ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಯಿಂದಾಗಿ ಬೆಳೆ ಹಾಗೂ ಜೀವ ಹಾನಿಯೂ ಆಗುತ್ತಿದ್ದು, ಇಂತಹ ಪ್ರಕರಣಗಳಲ್ಲಿ ಸರಕಾರ ನೀಡುತ್ತಿರುವ ಪರಿಹಾರವನ್ನು ಹೆಚ್ಚಿಸಲು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಮುಖ್ಯಮಂತ್ರಿಗಳ ಗಮನ ಸೆಳೆಯಲಾಗುವುದು ಎಂದರು.
Related Articles
Advertisement
ಅನಧಿಕೃತ ಹೋಂಸ್ಟೇ ವಿರುದ್ಧ ಕ್ರಮಜಿಲ್ಲೆಯ ಅನಧಿಕೃತ ಹೋಂ ಸ್ಟೇಗಳ ವಿರುದ್ಧ ಮುಂದಿನ ದಿನಗಳಲ್ಲಿ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಗೋಹತ್ಯೆ ನಿಷೇಧ ಅಗತ್ಯ: ಸುಧಾಕರ್
ಬೆಂಗಳೂರು: ಗೋಹತ್ಯೆ ನಿಷೇಧ ಕಾನೂನು ಜಾರಿಯಾಗುವ ಅಗತ್ಯವಿದ್ದು, ಈ ಬಗ್ಗೆ ಮತ್ತಷ್ಟು ಚರ್ಚೆಯಾಗಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ.ಸುಧಾಕರ್ ಅಭಿಪ್ರಾಯಪಟ್ಟರು. ಸುದ್ದಿಗಾರರ ಜತೆ ಮಾತನಾಡಿದ ಅವರು, ದೇಶದಲ್ಲಿ ಗೋವು ಪವಿತ್ರ ಎಂದು ಪರಿಗಣನೆಯಾಗಿದ್ದು, ಗೋಹತ್ಯೆ ಯಿಂದ ಪಾರಂಪರಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ. ಗೋವನ್ನು ಕುಟುಂಬದ ಸದಸ್ಯರಂತೆ ನಾವು ಗೌರವಿಸುತ್ತೇವೆ. ಗೋಹತ್ಯೆ ಹಿಂದೂಗಳ ಸಂಪ್ರದಾಯಕ್ಕೆ ವಿರು ದ್ಧವಾದ ಕ್ರಮವಾಗಿದೆ ಎಂದರು.