ಮುಂಬೈ; ಕೋವಿಡ್-19 ಸೋಂಕಿನ ವಿರುದ್ಧದ ಹೋರಾಟಕ್ಕೆ ನೆರವು ನೀಡಲು ದೇಶಾದ್ಯಂತ ಸಂಘ ಸಂಸ್ಥೆಗಳು, ಗಣ್ಯ ವ್ಯಕ್ತಿಗಳು ಸಹಾಯ ಮಾಡುತ್ತಿದೆ. ಇದೇ ನಿಟ್ಟಿನಲ್ಲಿ ಪ್ರತಿಷ್ಠಿತ ಟಾಟಾ ಸಮೂಹ ಕೂಡಾ 1500 ಕೋಟಿ ರೂ. ದೇಣಿಗೆ ನೀಡಿದೆ ಎಂದು ವರದಿಯಾಗಿದೆ.
ಟಾಟಾ ಸನ್ಸ್ ಮತ್ತು ಟಾಟಾ ಟ್ರಸ್ಟ್ ಕ್ರಮವಾಗಿ ಒಂದು ಸಾವಿರ ಕೋಟಿ ಮತ್ತು 500 ಕೋಟಿ ರೂ. ನೀಡಲು ನಿರ್ಧರಿಸಿದೆ ಎನ್ನಲಾಗಿದೆ.
ಇಂತಹ ಕಠಿಣ ಸಂದರ್ಭದಲ್ಲಿ ಕೋವಿಡ್-19 ಸೋಂಕಿನ ವಿರುದ್ಧ ಹೋರಾಡಲು ಕೆಲವು ವೈದ್ಯಕೀಯ ಸಾಧನಗಳ ತುರ್ತು ಅಗತ್ಯವಿದೆ ಎಂದು ನಂಬಿದ್ದೇನೆ ಎಂದು ಟಾಟಾ ಟ್ರಸ್ಟ್ ಅಧ್ಯಕ್ಷ ರತನ್ ಟಾಟಾ ಹೇಳಿದ್ದಾರೆ.
ದೇಶದಲ್ಲಿ ಕೋವಿಡ್-19 ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸದ್ಯ 979 ಜನರಿಗೆ ಸೋಂಕು ತಗುಲಿದೆ. ಇದರಲ್ಲಿ 87 ಜನರು ಗುಣಮುಖರಾಗಿದ್ದು, 25 ಜನರು ಸಾವನ್ನಪ್ಪಿದ್ದಾರೆ.
ಸೋಂಕು ಹರಡುವುದನ್ನು ತಪ್ಪಿಸಲು ದೇಶದಾದ್ಯಂತ 21 ದಿನಗಳ ಲಾಕ್ ಡೌನ್ ಗೆ ಕರೆ ಕೊಡಲಾಗಿದೆ.