Advertisement

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

01:22 PM Sep 28, 2024 | Team Udayavani |

ತಮಿಳುನಾಡು: ತಮಿಳುನಾಡಿನ ಕೃಷ್ಣಗಿರಿಯಲ್ಲಿರುವ ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಶನಿವಾರ ಬೆಳಗ್ಗೆ ಬೆಳಗ್ಗೆ 5.30ರ ಸುಮಾರಿಗೆ ಭಾರೀ ಅಗ್ನಿ ಅವಘಡ ಸಂಭವಿಸಿ ಕೋಟ್ಯಂತರ ಮೌಲ್ಯದ ಸೊತ್ತುಗಳು ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.

Advertisement

ಪೊಲೀಸರ ಮಾಹಿತಿ ಪ್ರಕಾರ, ಉದ್ದಾನಪಲ್ಲಿಯಲ್ಲಿರುವ ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್‌ನ (TEPL) ಮೊಬೈಲ್ ಫೋನ್ ಬಿಡಿಭಾಗಗಳ ತಯಾರಿಕಾ ಘಟಕದ ರಾಸಾಯನಿಕ ಗೋದಾಮಿನಲ್ಲಿ ಬೆಳಿಗ್ಗೆ 5:30 ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆ ಬಳಿಕ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ಎಲ್ಲ ನೌಕರರನ್ನು ಸುರಕ್ಷಿತವಾಗಿ ಹೊರ ಕಳುಹಿಸಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಅಧಿಕಾರಿಗಳು ಏಳು ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿದ್ದು, ಬೆಂಕಿಯನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.

ಈ ಕಂಪನಿಯಲ್ಲಿ, (TEPL) ಐಫೋನ್‌ಗಳಲ್ಲಿ ಬಳಸುವ ವಿವಿಧ ಬಿಡಿಭಾಗಗಳನ್ನು ತಯಾರಿಸುತ್ತದೆ. ಸುಮಾರು 4,500 ನೌಕರರು ಇಲ್ಲಿ ಕೆಲಸ ಮಾಡುತ್ತಿದ್ದಾರೆ. ಅಪಘಾತದ ಸಮಯದಲ್ಲಿ ಮೊದಲ ಪಾಳಿಯಲ್ಲಿ 1,500 ನೌಕರರು ಕರ್ತವ್ಯದಲ್ಲಿದ್ದರು. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಅವಘಡಕ್ಕೆ ಏನು ಕಾರಣ ಎಂಬ ಬಗ್ಗೆ ತನಿಖೆ ನಡೆಸಬೇಕಾಗಿದೆ.

ಇನ್ನು ಫ್ಯಾಕ್ಟರಿ ಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕೋಟ್ಯಂತರ ಮೌಲ್ಯದ ಸೊತ್ತುಗಳು ನಾಶವಾಗಿರುವುದಾಗಿ ಹೇಳಲಾಗಿದೆ. ಘಟನೆಯಿಂದ ಕಿಲೋಮೀಟರ್ ದೂರದ ವರೆಗೆ ದಟ್ಟ ಹೊಗೆ ಆವರಿಸಿದ್ದು, ಸದ್ಯ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

 

Advertisement

ಮುಂಜಾಗ್ರತಾ ಕ್ರಮವಾಗಿ ಸುತ್ತಮುತ್ತಲ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಗಿದ್ದು ಅಗ್ನಿಶಾಮಕ, ಹಾಗೂ ಪೊಲೀಸ್ ಸಿಬಂದಿಗಳಿಂದ ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next