ನವದೆಹಲಿ: ಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಪವರ್ ಗ್ರಿಡ್ ಕಾರ್ಪೊರೇಷನ್‌ನ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಎಸ್.ಝಾ ಮತ್ತು ಟಾಟಾ ಪ್ರಾಜೆಕ್ಟ್ಸ್ ಲಿಮಿಟೆಡ್‌ನ ಐವರು ಅಧಿಕಾರಿಗಳನ್ನು ಸಿಬಿಐ ಬಂಧಿಸಿದೆ.
ಗುರುಗ್ರಾಮದಲ್ಲಿ ಇರುವ ಝಾ ಅವರ ನಿವಾಸದಿಂದ 93 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ಮಾಹಿತಿ ನೀಡಿದೆ. ಗುತ್ತಿಗೆ ಪಡೆದುಕೊಳ್ಳುವ ನಿಟ್ಟಿನಲ್ಲಿ ಲಂಚ ನೀಡಲಾಗಿದೆ ಎಂದು ಆರೋಪಿಸಲಾಗಿತ್ತು. ಲಂಚ ಸ್ವೀಕಾರದ ಬಗ್ಗೆ ಫೆಬ್ರವರಿಯಲ್ಲಿಯೇ ಎಫ್ಐಆರ್ ದಾಖಲಿಸಲಾಗಿತ್ತು. ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂಗಾಗಿ ಇರುವ ಈಶಾನ್ಯ ರಾಜ್ಯಗಳಲ್ಲಿ ವಿದ್ಯುತ್ ವ್ಯವಸ್ಥೆ ಸುಧಾರಿಸುವ ಯೋಜನೆ ಗುತ್ತಿಗೆಯನ್ನು ಟಾಟಾ ಪ್ರಾಜೆಕ್ಟ್ಸ್ ಗೆ ನೀಡಲಾಗಿತ್ತು.
ವಿಶ್ವಬ್ಯಾಂಕ್ ನೆರವಿನ ಯೋಜನೆ ಇದಾಗಿದ್ದು, ಒಟ್ಟು 6,700 ಕೋಟಿ ರೂ. ಮೊತ್ತ ವಿನಿಯೋಗಿಸಲು ತೀರ್ಮಾನಿಸಲಾಗಿತ್ತು.