ನೋಯ್ಡಾ: ಗ್ರೇಟರ್ ನೋಯ್ಡಾದ ಜೇವಾರ್‌ನಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಅತಿದೊಡ್ಡ ವಿಮಾನ ನಿಲ್ದಾಣವನ್ನು ಟಾಟಾ ಗ್ರೂಪ್‌ನ ಟಾಟಾ ಪ್ರಾಜೆಕ್ಟ್ಸ್ ನಿರ್ಮಿಸಲಿದೆ.
ಅದಕ್ಕೆ ಸ್ವಿಜರ್ಲೆಂಡ್‌ನ ಜ್ಯೂರಿಚ್‌ನ ಜ್ಯುರಿಚ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಕೈಜೋಡಿಸಲಿದೆ.
ಯೋಜನೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜ್ಯೂರಿಚ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಯಮುನಾ ಇಂಟರ್‌ನ್ಯಾಷನಲ್ ಏರ್‌ಪೋರ್ಟ್ ಪ್ರೈ.ಲಿಮಿಟೆಡ್ ಎಂಬ ಸಂಸ್ಥೆಯನ್ನೂ ರಚಿಸಿದೆ.
ಟಾಟಾ ಪ್ರಾಜೆಕ್ಟ್ಸ್ ಹೊಸ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್, ರನ್‌ವೇ, ರಸ್ತೆಗಳು, ವಿಮಾನ ನಿರ್ವಹಣೆ ಮತ್ತು ದುರಸ್ತಿ ಸೇರಿದಂತೆ ಇನ್ನಿತರ ವ್ಯವಸ್ಥೆಗಳನ್ನು ನಿರ್ಮಿಸಲಿದೆ ಎಂದು ಯಮುನಾ ಇಂಟರ್ ನ್ಯಾಷನಲ್ ಏರ್‌ಪೋರ್ಟ್ ಪ್ರೈವೆಟ್ ಲಿಮಿಟೆಡ್ ಶುಕ್ರವಾರ ತಿಳಿಸಿದೆ.
2019ರಲ್ಲಿ ಈ ಯೋಜನೆ ಬಗ್ಗೆ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು.