Advertisement
ಅರೆ, ಇದೇನಿದು ವಿಚಿತ್ರ ಹೆಸರು,ಚಂಡ ಮಾರುತಕ್ಕೆ. ಮ್ಯಾನ್ಮಾರ್ ಚಂಡ ಮಾರುತಕ್ಕೆ ಈ ಹೆಸರನ್ನು ಸೂಚಿಸಿದೆ. ತೌಕ್ತೆ ಎಂದರೆ ಒಂದು ಜಾತಿಯ ಹಲ್ಲಿ.
Related Articles
Advertisement
ಚಂಡಮಾರುತ ಎಂದರೆ ಸಮುದ್ರದಲ್ಲಿ ಒಂದು ಕಡೆ ನಿಮ್ನ ಒತ್ತಡ ಸೃಷ್ಟಿಯಾಗಿ ಸುತ್ತಲಿಂದಲೂ ಅಲ್ಲಿಗೆ ಗಾಳಿ ನುಗ್ಗುವುದು. ಅವು ನೇರ ನುಗ್ಗದೆ ಸುರುಳಿ ಆಕಾರದಲ್ಲಿ ಸುತ್ತುತ್ತ ಮೋಡಗಳನ್ನು ಎತ್ತಿ ಕೊಂಡು ಕೆಲವೇ ಗಂಟೆಗಳಲ್ಲಿ ಅತೀ ಪ್ರಬಲ ಶಕ್ತಿ ಪಡೆ ಯುತ್ತವೆ. ಧಾರಾಕಾರ ಮಳೆ, ಬಿರುಗಾಳಿ ಯೊಂದಿಗೆ ಸಮುದ್ರದ ತೀರಕ್ಕೆ ಅಪ್ಪಳಿಸಿ ಬೀಸಿ ಕೆಲವೇ ಗಂಟೆ ಗಳಲ್ಲಿ ಅನೇಕ ಅವಾಂತರಗಳನ್ನು ಉಂಟು ಮಾಡುತ್ತದೆ. ಭಾರತದ ಪೂರ್ವ ಕರಾವಳಿಯಲ್ಲಿ, ಬಂಗಾಲ ಕೊಲ್ಲಿಯಲ್ಲಿ ಹುಟ್ಟುವ ಚಂಡಮಾರುತ ಪ್ರತೀ ವರ್ಷವಿರುತ್ತದೆ. ಅದು ಅಪರೂಪವೇನಲ್ಲ. ಅದರ ಪಾರ್ಶ್ವ ಪರಿಣಾಮಗಳನ್ನು ಮಾತ್ರವೇ ನಾವು ಇದುವರೆಗೆ ಎದುರಿಸಿರುವುದು. ಆದರೆ ಪಶ್ಚಿಮ ಕರಾವಳಿಯಲ್ಲಿರುವ ನಮಗೆ ಚಂಡಮಾರುತ ಅತೀ ಅಪರೂಪ. ಬಹುಶಃ ಸಮುದ್ರ ತೀರಕ್ಕೆ ಗೋಡೆಯಂತಿರುವ ಸಸ್ಯ ಶ್ಯಾಮಲೆ ಯಾಗಿದ್ದ ಪಶ್ಚಿಮಘಟ್ಟವೇ ಇದಕ್ಕೆ ಕಾರಣವಿದ್ದಿರಬೇಕು.ಈಗ ಕಾಡು ಬೋಳಾಗಿರುವುದ ರಿಂದ ಭೂಮಿಯ ಉಷ್ಣತೆ ಸುಮಾರು 1.5 ಡಿಗ್ರಿ ಏರಿರುವುದ ರಿಂದ ಅರಬಿ ಸಮುದ್ರದಲ್ಲೂ ಚಂಡಮಾರುತ ಭಾರತದ ಪೂರ್ವ ಕರಾವಳಿಯಲ್ಲಿ ಪ್ರತೀ ವರ್ಷ ಬರುವಂತೆ ಮಾಮೂಲಾಗಿ ಬರುತ್ತಿದೆ. ಪ್ರಕೃತಿ ಮುನಿ ದರೆ ಹೀಗೆಯೇ. ಅನುಭವಿಸಬೇಕಷ್ಟೆ. * ಡಾ| ಎ.ಪಿ. ಭಟ್, ನಿವೃತ್ತ ಪ್ರಾಂಶುಪಾಲರು, ಪೂರ್ಣಪ್ರಜ್ಞ ಕಾಲೇಜು ಉಡುಪಿ.