Advertisement

ತೆರಿಗೆ ಸಂಗ್ರಹ ಲಕ್ಷ ಕೋಟಿ ಸನಿಹ ನಿರೀಕ್ಷೆ

06:40 AM Mar 23, 2018 | Team Udayavani |

ಬೆಂಗಳೂರು: ಕರ್ನಾಟಕ ಹಾಗೂ ಗೋವಾ ವ್ಯಾಪ್ತಿಯಲ್ಲಿ ಪ್ರಸಕ್ತ ಹಣಕಾಸು ವರ್ಷದಲ್ಲಿ ಈವರೆಗೆ 98,000 ಕೋಟಿ ರೂ. ಆದಾಯ ತೆರಿಗೆ ಸಂಗ್ರಹವಾಗಿದ್ದು, ಆರ್ಥಿಕ ವರ್ಷ ಮುಗಿಯುವುದರೊಳಗೆ ಒಂದು ಲಕ್ಷ ಕೋಟಿ ರೂ. ಮೀರುವ ನಿರೀಕ್ಷೆಯಿದ್ದು,ದಾಖಲೆ ಎನಿಸಲಿದೆ ಎಂದು ಕರ್ನಾಟಕ ಮತ್ತು ಗೋವಾ ಪ್ರಧಾನ ಮುಖ್ಯ ಆದಾಯ ತೆರಿಗೆ ಆಯುಕ್ತ ರಜನೀಶ್‌ ಕುಮಾರ್‌ ಹೇಳಿದ್ದಾರೆ.

Advertisement

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸದ್ಯದಲ್ಲೇ ಕರ್ನಾಟಕ ಹಾಗೂ ಗೋವಾ ಪ್ರದೇಶ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಆದಾಯ ತೆರಿಗೆ ಒಂದು ಲಕ್ಷ ಕೋಟಿ ರೂ. ದಾಟುವ ನಿರೀಕ್ಷೆ ಇದೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಈವರೆಗೆ 50 ದಾಳಿ ನಡೆಸಲಾಗಿದ್ದು, 5,259.4 ಕೋಟಿ ರೂ. ಮೊತ್ತದ ಅಘೋಷಿತ ಆಸ್ತಿ, ಹಣ ಪತ್ತೆಯಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next